ಲಾರಿ ಡಿಕ್ಕಿಯಾಗಿ ಆನೆ ಸಾವು ಪ್ರಕರಣ: ಡ್ರೈವರ್, ಕ್ಲೀನರ್ ಅರೆಸ್ಟ್
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೇರಳ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿರುವ ಪ್ರಕರಣ ಸಂಬಂಧ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ.
ಬಂಧಿತ ಚಾಲಕನ ಹೆಸರು ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.30ಕ್ಕೆ ಮದ್ದೂರು ವಲಯದಲ್ಲಿ ಘಟನೆ ನಡೆದಿದೆ. ಕೇರಳದಿಂದ ಗುಂಡ್ಲುಪೇಟೆಯತ್ತ ಬರುತ್ತಿದ್ದ ತಮಿಳುನಾಡು ನೋಂದಣಿ ಲಾರಿಯು ಹೆಣ್ಣಾನೆಗೆ ಡಿಕ್ಕಿ ಹೊಡೆದಿದೆ. ಆನೆಗೆ 25ರಿಂದ 30 ವರ್ಷ ವಯಸ್ಸಾಗಿದೆ ಎಂದು ಅಂದಾಜಿಸಲಾಗಿದೆ.
ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧವಿದೆ. ಕೊಯಮತ್ತೂರು ಮೂಲದ ಲಾರಿಯು ರಾತ್ರಿ 8 ಗಂಟೆಗೆ ಮೂಲೆಹೊಳೆ ಚೆಕ್ ಪೋಸ್ಟ್ ದಾಟಿದೆ. ಚಾಲಕ ವೇಗವಾಗಿ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka