ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಒತ್ತು; ಸಚಿವ ಎಸ್.ಟಿ.ಸೋಮಶೇಖರ್

2023-24ರ ಆಯವ್ಯಯದಲ್ಲಿ ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.
ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಕ್ರಮವಹಿಸುವುದರ ಜೊತೆಗೆ ಅಂತರಾಷ್ಟ್ರೀಯ ಮಟ್ಟದ ರಾಜ್ಯ ವಸ್ತು ಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವುದಾಗಿ ಘೋಷಿಸಲಾಗಿದೆ.
ಕ್ಯಾನ್ಸರ್ ಚಿಕಿತ್ಸಾ ಕೇಂದ್ರ, ಟೌನ್ ಶಿಫ್ ನಿರ್ಮಾಣಕ್ಕೆ ಒತ್ತು ನೀಡಿರುವುದರ ಜೊತೆಗೆ ವಿಮಾನ ನಿಲ್ದಾಣದ ಉನ್ನತೀಕರಿಸಲು 320 ಕೋಟಿ ರೂ ಗಳಷ್ಟು ಹಂಚಿಕೆ ಮಾಡಲಾಗಿದೆ. ಕಾಡಾನೆ ಹಾವಳಿ, ಚಿರತೆ ದಾಳಿ ತಡೆಗೆ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಅನುಮೋದನೆ ನೀಡಲಾಗಿದೆ.
ಒಟ್ಟಾರೆ ಮೈಸೂರು ಜಿಲ್ಲೆಗೆ ಈ ಬಾರಿಯ ಬಜೆಟ್‌ನಲ್ಲಿ ಹಲವು ಕೊಡುಗೆಗಳನ್ನು ನೀಡಿರುವುದು ಸಂತಸದ ವಿಚಾರ ಎಂದು ಹೇಳಿಕೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw