ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರವೇ ಕಾರಣ | ಪ್ರಧಾನಿ ಮೋದಿ - Mahanayaka
4:35 AM Saturday 9 - November 2024

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರವೇ ಕಾರಣ | ಪ್ರಧಾನಿ ಮೋದಿ

17/02/2021

ನವದೆಹಲಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಗಗನಕ್ಕೇರಿದೆ. ಇಲ್ಲಿಯವರೆಗೆ ಪ್ರಧಾನಿ ಮೋದಿ ಈ ಬಗ್ಗೆ ಹೇಳಿಕೆ ನೀಡಿರಲಿಲ್ಲ. ಆದರೆ, ಚೆನ್ನೈನಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂಧನ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದಾರೆ.

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರವೇ ಕಾರಣ ಎಂದು ಅವರು ವಾದಿಸಿದ್ದು,  ನಮ್ಮ ಹಿಂದಿನ ಸರ್ಕಾರಗಳು ಇಂಧನಗಳ ಆಮದಿನ ಮೇಲೆ ಅಷ್ಟೊಂದು ಪ್ರಮಾಣದಲ್ಲಿ ಅವಲಂಬನೆ ಆಗದೇ ಇದ್ದಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಭಾರತ 2019-20 ನೇ ಸಾಲಿನಲ್ಲಿ ಶೇ 85 ರಷ್ಟು ಇಂಧನವನ್ನು ಪರದೇಶಗಳಿಂದ ಆಮದು ಮಾಡಿಕೊಂಡಿದೆ. ಅಗತ್ಯ ಇಂದನಗಳ ಬೆಲೆ ಹೆಚ್ಚಳ ನಿಜಕ್ಕೂ ತೀವ್ರ ಕಳವಳಕಾರಿಯಾಗಿದೆ. ಇದು ಮಧ್ಯಮ ವರ್ಗದವರಿಗೆ, ಬಡವರಿಗೆ ತೀವ್ರ ಹೊರೆಯಾಗುತ್ತದೆ. ಇಂಧನದ ಆಮದಿನ ಮೇಲೆ ನಾವು ಇಷ್ಟೊಂದು ಪ್ರಮಾಣದಲ್ಲಿ ಅವಲಂಭನೆ ಆಗಬೇಕಾ ಎಂದು ಪ್ರಧಾನಿ ಮೋದಿ ಹಿಂದಿನ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ