ಇಂಡೋನೇಷ್ಯಾ ದಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 85 ಮಂದಿಗೆ ಗಾಯ
ಜಕಾರ್ತ: ಇಂಡೋನೇಷ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 10,000ಕ್ಕೂ ಹೆಚ್ಚು ಕಟ್ಟಡಗಳು, ಮನೆಗಳು ಧ್ವಂಸವಾಗಿದ್ದು, ಏಳು ಮಮದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇಂಡೋನೇಷ್ಯಾದ ಪಸಮನ್ ಬರಾತ್ ಜಿಲ್ಲೆಯ ಈಶಾನ್ಯಕ್ಕೆ 17 ಕಿ.ಮೀ. ದೂರದಲ್ಲಿ, ಭೂಮಿಯ 10 ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭೂಕಂಪನದಲ್ಲಿ ಏಳು ಮಂದಿ ಮೃತಪಟ್ಟಿದ್ದು, 85 ಮಂದಿ ಗಾಯಗೊಂಡಿದ್ದಾರೆ. ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಮನೆಗಳನ್ನು ತೊರೆದಿದ್ದು ಸುಮಾರು 35 ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂಸ್ಥೆಯ ಹಂಗಾಮಿ ವಕ್ತಾರ ಅಬ್ದುಲ್ ಮುಹಾರಿ ಈ ಕುರಿತು ಮಾಹಿತಿ ನೀಡಿದ್ದು, ಪಸಮಾನ್ ಬರಾತ್ ಜಿಲ್ಲೆಯಲ್ಲಿ ಮೂವರು ಮತ್ತು ಪಸಮಾನ್ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಎಲ್ಲಾ 85 ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಎರಡೂ ಜಿಲ್ಲೆಗಳು ಭೂಕಂಪದಿಂದ ಹೆಚ್ಚು ಹಾನಿಗೆ ಒಳಗಾಗಿವೆ ಹೇಳಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪೊಲೀಸರು, ವಿಪತ್ತು ಏಜೆನ್ಸಿ ಸಿಬ್ಬಂದಿ, ಸೈನಿಕರು, ಸ್ವಯಂಸೇವಕರು ಮತ್ತು ಸ್ಥಳೀಯರನ್ನು ಒಳಗೊಂಡ ಜಂಟಿ ಕಾರ್ಯಪಡೆ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ನಾಪತ್ತೆಯಾದರ ಹುಡುಕಾಟಕ್ಕೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಬ್ದುಲ್ ಮುಹಾರಿ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿಯ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಸುಹರ್ಯಾಂತೋ ಅವರು ಭೂಕಂಪದ ನಂತರ ತುರ್ತು ಪರಿಹಾರ ಕ್ರಮಗಳಿಗೆ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನ: ಇಬ್ಬರು ಆರೋಪಿಗಳ ಸೆರೆ
ಪತಿಯನ್ನು ಕೊಂದು ದೇಹದ ತುಂಡು ಟ್ಯಾಂಕ್‍ನಲ್ಲಿ ಬಚ್ಚಿಟ್ಟ ಪತ್ನಿ
ಡ್ರ್ಯಾಗನ್ ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಬರ್ಬರ ಹತ್ಯೆ
ಬಿಜೆಪಿ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಯ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ