ಇಂದು ಬಿಹಾರ ಬಂದ್: ನಾಲ್ವರ ಬಂಧನ - Mahanayaka

ಇಂದು ಬಿಹಾರ ಬಂದ್: ನಾಲ್ವರ ಬಂಧನ

bandh
28/01/2022

ಪಾಟ್ನಾ: ರೈಲ್ವೆ ನೇಮಕಾತಿ ಮಂಡಳಿ ನಡೆಸಿದ ಎನ್ ​ಟಿ ಪಿ ಸಿ ಸಿಬಿಟಿ ಮೊದಲ ಹಂತದ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ, ಪರೀಕ್ಷಾರ್ಥಿಗಳು ನಡೆಸಿದ ಪ್ರತಿಭಟನೆ ಈಗಾಗಲೇ ತೀವ್ರ ಸ್ವರೂಪ ತಳೆದಿದೆ. ವಿದ್ಯಾರ್ಥಿಗಳ ಪರವಾಗಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್‌ಎ) ಮತ್ತು ಇತರ ಯುವ ಸಂಘಟನೆಗಳು ಇಂದು ಬಿಹಾರ ರಾಜ್ಯ ಬಂದ್‌ಗೆ ಕರೆ ನೀಡಿದೆ.

ಬಂದ್ ​ಗೆ ಹಲವು ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ಬಿಹಾರ ಮಹಾಘಟಬಂಧನ್​​ ಎಲ್ಲ ಪಕ್ಷಗಳು ಮತ್ತು ಜನ್ ಅಧಿಕಾರ್ ಪಕ್ಷ ಮತ್ತು ವಿದ್ಯಾರ್ಥಿ ಸಂಘಟನೆಯಾದ ಇಂಕ್ವಿಲಾಬಿ ನೌಜವಾನ್ ಸಭಾ ಕೂಡಾ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದೆ.

ರೈಲ್ವೇ ನೇಮಕಾತಿ ಮಂಡಳಿ ಪರೀಕ್ಷಾ ನೀತಿ ಮಾತ್ರವಲ್ಲದೇ, ಪರೀಕ್ಷಾ ನೀತಿಯ ವಿರುದ್ಧ ಪ್ರತಿಭಟನೆ ನಡೆಸಿದ ಪರೀಕ್ಷಾರ್ಥಿಗಳ ಮೇಲೆ ಲಾಠಿ ಚಾರ್ಜ್, ದೂರುಗಳು ಮತ್ತು ಬಂಧನವನ್ನು ಖಂಡಿಸಿ, ಇಂದು ಬಿಹಾರ ಬಂದ್​ಗೆ ಕರೆ ನೀಡಲಾಗಿದೆ.

ಪರೀಕ್ಷಾರ್ಥಿಗಳ ವಿರುದ್ಧ ಸರ್ಕಾರ ಅನುಸರಿಸುತ್ತಿರುವ ಧೋರಣೆ ಖಂಡಿಸಿ, ಹಲವು ಪಕ್ಷಗಳು ಗುರುವಾರ ಸುದ್ದಿಗೋಷ್ಠಿ ನಡೆಸಿದ್ದವು. ಈ ವೇಳೆ, ಮಾತನಾಡಿದ ಆರ್‌ಜೆಡಿ ರಾಜ್ಯಾಧ್ಯಕ್ಷ ಜಗದಾನಂದ್ ಸಿಂಗ್ ಬಿಹಾರ್​ ಬಂದ್​ ಬೆಂಬಲ ಘೋಷಿಸಿ, ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ಆರ್‌ಜೆಡಿ, ಕಾಂಗ್ರೆಸ್, ಸಿಪಿಐ ಮತ್ತು ಸಿಪಿಐ(ಎಂ) ಜಂಟಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಬಿಹಾರವು ದೇಶದಲ್ಲಿ ಅತಿ ಹೆಚ್ಚು ಯುವಜನರನ್ನು ಹೊಂದಿದೆ. ಅತಿ ಹೆಚ್ಚು ನಿರುದ್ಯೋಗ ದರವೂ ಇಲ್ಲಿದೆ. ಕೇಂದ್ರ ಹಾಗೂ ಬಿಹಾರ ಸರ್ಕಾರಗಳಿಂದ ಇಲ್ಲಿನ ಯವಜನತೆ ವಂಚನೆಗೆ ಒಳಗಾಗುತ್ತಿದ್ದಾರೆ. ಇದನ್ನು ವಿರೋಧಿಸಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರೆ ಅವರ ಮೇಲೆ ನಿತೀಶ್ ಸರ್ಕಾರ ಲಾಠಿ ಚಾರ್ಜ್ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎನ್‌ಡಿಎ ಘಟಕವಾದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮುಖ್ಯಸ್ಥ ಮತ್ತು ಬಿಹಾರ ರಾಜ್ಯದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಕೂಡ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬೆಂಬಲಕ್ಕೆ ಬಂದಿದ್ದು, ವಿದ್ಯಾರ್ಥಿಗಳ ಮೇಲೆ ಎಫ್​ಐಆರ್ ದಾಖಲು ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.

ರೈಲ್ವೆ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟುಮಾಡಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುವತಿಯ ಅಪಹರಣ: ಲೈಂಗಿಕ ದೌರ್ಜನ್ಯವೆಸಗಿ ಬೀದಿಯಲ್ಲಿ ಮೆರವಣಿಗೆ

ಶಾಸಕ ಎಂ.ಪಿ. ಕುಮಾರಸ್ವಾಮಿಯಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

3 ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಯತ್ನ: ಆರೋಪಿಯ ಸೆರೆ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಝೊಮೆಟೋ ಡೆಲಿವರಿ ಬಾಯ್ ಹೊಟೇಲ್ ಸಿಬ್ಬಂದಿ ನಡುವೆ ಮಾರಾಮಾರಿ!

ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯಿಂದ ಗೂಸಾ

 

ಇತ್ತೀಚಿನ ಸುದ್ದಿ