ಇನ್ನೆಷ್ಟು ದಿನ ಇರಲಿದೆ ಅಕಾಲಿಕ ಮಳೆ? | ಹವಾಮಾನ ಇಲಾಖೆ ಹೇಳಿದ್ದೇನು? - Mahanayaka
2:16 PM Wednesday 5 - February 2025

ಇನ್ನೆಷ್ಟು ದಿನ ಇರಲಿದೆ ಅಕಾಲಿಕ ಮಳೆ? | ಹವಾಮಾನ ಇಲಾಖೆ ಹೇಳಿದ್ದೇನು?

rain
23/04/2022

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 24 ರವರೆಗೆ ಮತ್ತು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಏಪ್ರಿಲ್ 24 ರವರೆಗೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೇ ಮನೆಯ ಐವರನ್ನು ಹತ್ಯೆ ಮಾಡಿ ಮನೆಗೆ ಬೆಂಕಿ ಇಟ್ಟ ಪಾಪಿಗಳು!

ಯಾವ ಅಪರಾಧಕ್ಕಾಗಿ ಬೆದರಿಕೆ ಹಾಕುತ್ತಿದ್ದೀರಿ?: ಶಾಸಕ ರಘುಪತಿ ಭಟ್ ಗೆ ಹಿಜಾಬ್ ಪರ ವಿದ್ಯಾರ್ಥಿನಿ ಪ್ರಶ್ನೆ

ಅವಳಿ ಮಕ್ಕಳಿಗೆ ಹಾಲುಣಿಸುತ್ತಿದ್ದ ವೇಳೆ ಕುಸಿದುಬಿದ್ದು ತಾಯಿ ಸಾವು

ಜಾಲಿ ರೈಡ್:  ಬೈಕ್ ಸಹಿತ ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ಇತ್ತೀಚಿನ ಸುದ್ದಿ