ಮಾಧ್ಯಮಗಳನ್ನು ಇನ್ನು 6 ತಿಂಗಳಲ್ಲಿ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತೇವೆ | ಅಣ್ಣಾಮಲೈ ವಿವಾದಿತ ಹೇಳಿಕೆ
16/07/2021
ಚೆನ್ನೈ: ತಮಿಳುನಾಡಿನ ಮಾಧ್ಯಮಗಳನ್ನು ಇನ್ನು ಆರು ತಿಂಗಳಿನಲ್ಲಿ ಬಿಜೆಪಿ ನಿಯಂತ್ರಣಕ್ಕೆ ಪಡೆದುಕೊಳ್ಳಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದು, ಇದೀಗ ಇದು ವಿವಾದಕ್ಕೆ ಕಾರಣವಾಗಿದೆ.
ರಾಜ್ಯ ಬಿಜೆಪಿ ನಿಯೋಜಿತ ಅಧ್ಯಕ್ಷರಾಗಿರುವ ಅಣ್ಣಾಮಲೈ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರೆ ಇದಕ್ಕೂ ಮುನ್ನವೇ ಅವರು ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ. ಮಾಧ್ಯಮ ಸಂಸ್ಥೆಯು ದೀರ್ಘಕಾಲ ಸುಳ್ಳು ಸುದ್ದಿ ಹರಡಲು ಸಾಧ್ಯವಿಲ್ಲ. ತಮಿಳುನಾಡಿನ ಮಾಧ್ಯಮಗಳು ಬಿಜೆಪಿಯನ್ನು ಅನಗತ್ಯವಾಗಿ ಟೀಕಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ಸುಳ್ಳು ಸುದ್ದಿ ಹರಡುವಿಕೆಗೆ ಕಡಿವಾಣ ಹಾಕಲಾಗುವುದು. ಮುಂದಿನ 6 ತಿಂಗಳಿನಲ್ಲಿ ಮಾಧ್ಯಮವನ್ನು ನಾವು ನಿಯಂತ್ರಣಕ್ಕೆ ತೆಗೆದುಕೊಳ್ಳಲಿದ್ದೇವೆ ಎಂದು ಅಣ್ಣಾಮಲೈ ಹೇಳಿದರು. ಸದ್ಯ ಇವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.




























