ಸಚಿವ ಈಶ್ವರಪ್ಪ  ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ - Mahanayaka

ಸಚಿವ ಈಶ್ವರಪ್ಪ  ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

eshwarappa home
16/02/2022

ಬೆಂಗಳೂರು:  ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಿದರು.

ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈಶ್ವರಪ್ಪನವರು ತಮ್ಮ ವಿವಾದಿತ ಹೇಳಿಕೆಯ ಹಿನ್ನೆಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸದನದ ಬಾವಿಗಿಳಿದು ಕಾಂಗ್ರೆಸ್ ನಾಯಕರು ಪ್ರತಿಭಟಿಸಿದ್ದರು. ಸದನದೊಳಗೆ ಈಶ್ವರಪ್ಪನವರನ್ನು ‘ದೇಶದ್ರೋಹಿ’ ಎಂದು ಕರೆದ ಕಾಂಗ್ರೆಸ್ ನಾಯಕರು ಈಶ್ವರಪ್ಪನವರ ವಜಾಕ್ಕೆ ಪಟ್ಟುಹಿಡಿದಿದ್ದರು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಕೈಕಾರ್ಯಕರ್ತರು ಈಶ್ವರಪ್ಪನವರ ಸರ್ಕಾರಿ ನಿವಾಸಕ್ಕೆ  ಮುತ್ತಿಗೆ ಹಾಕಿದ್ದಾರೆ. ಸದ್ಯ ಈಶ್ವರಪ್ಪನವರ ನಿವಾಸದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೀನು ಲೂಟಿಕೋರ ನನ್ಮಗ, ದೇಶದ್ರೋಹಿ: ಈಶ್ವರಪ್ಪ ವಿರುದ್ಧ ಗುಡುಗಿದ ಡಿ.ಕೆ.ಶಿವಕುಮಾರ್

ನಂದಿನಿ ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ

ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ಕೈ ಬಿಡುವಂತೆ ಆಗ್ರಹಿಸಿ ನಿಲುವಳಿ ಸೂಚನೆ; ಸಿದ್ದರಾಮಯ್ಯ

ಬಾವಿಗೆ ಬಿದ್ದು ಬಾಲಕಿ ಸಾವು: ತಾಯಿ ವಿರುದ್ಧ ತಂದೆಯಿಂದಲೇ ಕೊಲೆ ಆರೋಪ

ಇತ್ತೀಚಿನ ಸುದ್ದಿ