ಆಝಾನ್ ಬಗ್ಗೆ ಅವಾಚ್ಯ ಹೇಳಿಕೆ: ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ಪರದಾಡಿದ ಈಶ್ವರಪ್ಪ! - Mahanayaka
3:55 PM Thursday 12 - December 2024

ಆಝಾನ್ ಬಗ್ಗೆ ಅವಾಚ್ಯ ಹೇಳಿಕೆ: ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ಪರದಾಡಿದ ಈಶ್ವರಪ್ಪ!

eshwarappa
13/03/2023

ರವಿವಾರ ಮಂಗಳೂರಲ್ಲಿ ನಡೆದ ಬಿಜೆಪಿ ಸಮಾರಂಭದಲ್ಲಿ ಅಝಾನ್ ಬಗ್ಗೆ ಮಾತನಾಡಿದ್ದು ನಿಜ. ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಝಾನ್‌ ನಿಂದ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು  ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಮಂಗಳೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ನಾಲ್ಕು ಮೈಕ್ ಹಾಕಿ ಕೂಗಿದರೆ ಸಮಸ್ಯೆಯಾಗುತ್ತಿದೆ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವೂ ಹೌದು. ಜನಸಾಮಾನ್ಯರ ಅಭಿಪ್ರಾಯವೂ ಅಲ್ಲ. ಧಾರ್ಮಿಕ ನಿಂದನೆ ಅಲ್ಲ ಎಂದು ಈಶ್ವರಪ್ಪ ಹೇಳಿದರು.

ಇನ್ನೂ ಇದೊಂದು ಧಾರ್ಮಿಕ ನಿಂದನೆ ಅಲ್ಲವೇ ಅನ್ನೋ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ಈಶ್ವರಪ್ಪನವರು ಪರದಾಡಿದ ಘಟನೆಯೂ ನಡೆಯಿತು.

ಇನ್ನೂ, ನಾನು ಎಲ್ಲಾ ಮುಸಲ್ಮಾನರ ವೋಟು ಬೇಡ ಎಂದು ಹೇಳಿಲ್ಲ ರಾಷ್ಟ್ರೀಯವಾದಿ ಮುಸಲ್ಮಾನರು ನಮ್ಮೊಂದಿಗೆ ಇದ್ದಾರೆ ಎಂದು ಅಡ್ಡಗೋಡೆಯ ಮೇಲೆ ದೀಪ ಇಟ್ಟರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ