ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆ!
ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಗುತ್ತಿಗೆಯಲ್ಲಿ ಶೇ.40ರಷ್ಟು ಕಮಿಷನ್ ಕೇಳಿದ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆ ಹಣ ಬಿಡುಗಡೆಗಾಗಿ ಈಶ್ವರಪ್ಪ ಶೇ.40ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು ಸಂತೋಷ್ ಆರೋಪಿಸಿದ್ದರು. ಈ ಬಗ್ಗೆ ಬಿಜೆಪಿ ವರಿಷ್ಠರಿಗೂ ದೂರು ನೀಡಿದ್ದರು.
ಈ ವಿಷಯವಾಗಿ ಕಾಂಗ್ರೆಸ್ ಈಶ್ವರಪ್ಪ ಅವರ ರಾಜೀನಾಮೆ ಕೇಳಿ ಧರಣಿ ನಡೆಸಿತ್ತು. ಇನ್ನೂ ತನ್ನ ಸಾವಿಗೆ ಕೆ.ಎಸ್.ಈಶ್ವರಪ್ಪನವರೇ ಕಾರಣ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಡೆತ್ ನೋಟ್ ಕೂಡ ವಾಟ್ಸಾಪ್ ಮಾಡಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೇಬಲ್ ಕಾರ್ ಡಿಕ್ಕಿ ಪ್ರಕರಣ: ಮೂವರು ಪ್ರವಾಸಿಗಳ ದಾರುಣ ಸಾವು
ಮತ್ತೊಂದು ಎಲೆಕ್ಟ್ರಿಕ್ ಬೈಕ್ ದುರಂತ: ಕಂಟೈನರ್ ನೊಳಗಿದ್ದ 20 ಬೈಕ್ ಗಳು ಸುಟ್ಟು ಭಸ್ಮ
ಮುಚ್ಚಿದ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳಿಗೆ ದೈವ ಗಳಿಂದಲೇ ಚಾಲನೆ
ಪತ್ನಿ ಹೆರಿಗೆ ಕೊಠಡಿಯಲ್ಲಿ, ಪತಿ ಬಾರ್ ನಲ್ಲಿ, ಮಗ ರಸ್ತೆಯಲ್ಲಿ | ಮನಕಲಕುವ ಘಟನೆ