ದೇಶದ ಪ್ರತಿ ಪಂಚಾಯತ್ ನಲ್ಲಿ ಪ್ರೈಮರಿ ಹಾಲಿನ ಡೈರಿ ಸ್ಥಾಪನೆ: ಅಮಿತ್ ಶಾ
ಮಂಡ್ಯ: ದೇಶದ ಪ್ರತಿ ಪಂಚಾಯತ್ ನಲ್ಲಿ ಪ್ರೈಮರಿ ಹಾಲಿನ ಡೈರಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಮೂರು ವರ್ಷದಲ್ಲಿ ಒಟ್ಟು 2 ಲಕ್ಷ ಪ್ರಾಥಮಿಕ ಡೈರಿ ನಿರ್ಮಿಸಲಾಗುವುದು. ಆ ಮೂಲಕ, ದೇಶದಿಂದ ಹಾಲು ರಫ್ತು ಮಾಡಲಾಗುವುದು. ಕರ್ನಾಟಕದಲ್ಲಿ ಹೈನು ಉದ್ಯಮ ಅಭಿವೃದ್ಧಿಗೆ ಬೇಕಾಗುವ ತಾಂತ್ರಿಕ ಸೌಲಭ್ಯ, ಸಹಕಾರಿ ಕ್ಷೇತ್ರಕ್ಕೆ ಬೇಕಾಗುವ ಎಲ್ಲ ನೆರವನ್ನು ಸಹಕಾರ ಸಚಿವಾಲಯದಿಂದ ಒದಗಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಕೆ.ಗೋಪಾಲಯ್ಯ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮನ್ಮೂಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka