ಯೂರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್‌ ಸ್ಥಾವರದ ಮೇಲೆ ರಷ್ಯಾ ದಾಳಿ - Mahanayaka
6:02 PM Wednesday 11 - December 2024

ಯೂರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್‌ ಸ್ಥಾವರದ ಮೇಲೆ ರಷ್ಯಾ ದಾಳಿ

paramanu 1
04/03/2022

ಕೀವ್‌: ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಶುಕ್ರವಾರ ಬೆಳಗ್ಗಿನ ಜಾವ ಯೂರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್‌ ಸ್ಥಾವರದ ಮೇಲೆ ರಷ್ಯಾ ಪಡೆಗಳು ಶೆಲ್ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಝಪೊರಿಝ್ಯಾದ ಪರಮಾಣು ವಿದ್ಯುತ್‌ ಸ್ಥಾವರದ ಮೇಲೆ ದಾಳಿ ನಡೆಸುತ್ತಿವೆ ಎಂದು ಉಕ್ರೇನ್ ವಿದೇಶಾಂಗ ವ್ಯವಹಾರಗಳ ಸಚಿವ ಡೈಟ್ರೊ ಕುಲೆಬಾ ಹೇಳಿದ್ದಾರೆ.
ಪರಮಾಣು ಸ್ಥಾವರಕ್ಕೆ ಈಗಾಗಲೇ ಬೆಂಕಿ ಹತ್ತಿಕೊಂಡಿದ್ದು, ಇದು ಸ್ಫೋಟಗೊಂಡರೆ ಅದು ಚೆರ್ಲೋಬಿಲ್ ದುರಂತದ ಹತ್ತು ಪಟ್ಟು ದೊಡ್ಡ ಸ್ಫೋಟವಾಗಬಹುದು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಝಪೊರಿಝ್ಯಾ ಪರಮಾಣು ವಿದ್ಯುತ್‌ ಸ್ಥಾವರದ ಘಟಕಗಳ ಮೇಲೆ ಮತ್ತು ಕಟ್ಟಡಗಳ ಮೇಲೆ ನಿರಂತರವಾಗಿ ಶತ್ರುಗಳು ಶೆಲ್‌ದಾಳಿ ನಡೆಸಿದ್ದರ ಪರಿಣಾಮ ಅಗ್ನಿ ಅನಾಹುತ ಸಂಭವಿಸಿದೆ. ಇದರಿಂದ ವಿಶ್ವದ ಭದ್ರತೆಗೆ ಅಪಾಯವಿದೆ ಎಂದು ಮೇಯರ್‌ ಡಿಮಿಟ್ರೊ ಓರ್‌ಲೊವ್‌ ಅವರು ಟೆಲಿಗ್ರಾಮ್‌ ಚಾನೆಲ್‌ ಒಂದಕ್ಕೆ ತಿಳಿಸಿದ್ದಾರೆ.

ರಷ್ಯಾ ಪಡೆ ಪರಮಾಣು ಸ್ಥಾವರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇದಕ್ಕಾಗಿ ಯುದ್ಧ ಟ್ಯಾಂಕ್‌ಗಳನ್ನು ನಗರಕ್ಕೆ ಸಾಗಿಸುತ್ತಿದೆ ಎಂದು ಉಕ್ರೇನ್‌ನ ಅಧಿಕಾರಿಗಳು ಇದಕ್ಕೂ ಮೊದಲು ಮಾಹಿತಿ ನೀಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಸ್ಕ್ರೂಡ್ರೈವರ್​ನಿಂದ ಚುಚ್ಚಿ ಪತ್ನಿಯ ಕೊಲೆಗೈದ ಪತಿ

ರಷ್ಯಾದ 7000 ಯೋಧರ ಸಾವು: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ಬೆಂಕಿ ಅವಘಡ : ಪತಿ ಸಾವು, ಪತ್ನಿ ಗಂಭೀರ

ಇತ್ತೀಚಿನ ಸುದ್ದಿ