ವೀರಪ್ಪನ್ ಹೋದ ಬಳಿಕವೂ ಪಾಲಾರ್ ಬಳಿ ಗುಂಡಿನ ಚಕಮಕಿ! - Mahanayaka

ವೀರಪ್ಪನ್ ಹೋದ ಬಳಿಕವೂ ಪಾಲಾರ್ ಬಳಿ ಗುಂಡಿನ ಚಕಮಕಿ!

paalaar
16/02/2023

ಚಾಮರಾಜನಗರ: ವೀರಪ್ಪನ್ ಅಳಿದ ಬಳಿಕವೂ ಹನೂರು ತಾಲೂಕಿನ ಗೋಪಿನಾಥಂ, ಪಾಲಾರ್ ಸುತ್ತಮುತ್ತಲು ಬೇಟೆಗಾರರು ಹಾವಳಿ ಇಡುತ್ತಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ.


Provided by

ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆ ಬೇಟೆಯಾಡಿ ತೆರಳುತ್ತಿದ್ದ ಅಂದಾಜು ನಾಲ್ವರು ಕಳ್ಳಬೇಟೆಗಾರರು ಹಾಗೂ ಮೂವರು ಅರಣ್ಯ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ‌ ಚಕಮಕಿ ನಡೆದಿದ್ದು ಬೇಟೆಗಾರರು ನದಿಗೆ ಹಾರಿ ಪರಾರಿಯಾಗಿದ್ದಾರೆ.

ಬೇಟೆಗಾರರ ತಲೆ ಬ್ಯಾಟರಿಗಳು ಪತ್ತೆಯಾಗಿದ್ದು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ಕೊಡಲಾಗಿದೆ, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆಂದು ಎಸಿಎಫ್ ಅಂಕರಾಜು ಮಾಹಿತಿ ನೀಡಿದ್ದಾರೆ.


Provided by

ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಗಡಿಯಂತೆ ಪಾಲಾರ್ ನದಿ ಹರಿಯಲಿದ್ದು ತಮಿಳುನಾಡು ಭಾಗದಿಂದ ತೆಪ್ಪದ ಮೂಲಕ ರಾಜ್ಯಕ್ಕೆ ಬಂದು ಜಿಂಕೆ ಬೇಟೆಯಾಡುತ್ತಾರೆ ಎನ್ನಲಾಗಿದ್ದು ಗುಂಡಿನ‌ ಚಕಮಕಿ ನಡೆಸಿರುವವರು ಗೋವಿಂದಪ್ಪಾಡಿ ಗ್ರಾಮದವರು ಎಂದು ಶಂಕಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ