ಜನ ಬೈದರೂ, ಮಾಧ್ಯಮ ವಿಪಕ್ಷ ಟೀಕಿಸಿದರೂ ನೀರಿನ ದರ ಹೆಚ್ಚಳ ಮಾಡ್ತೇವೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಜನ ಬೈದರೂ ಕೂಡ ನೀರಿನ ದರವನ್ನು ಹೆಚ್ಚಳ ಮಾಡಲೇಬೇಕಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಗುರುವಾರ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಧ್ಯಮ, ಜನ ವಿರೋಧಿಸಿದರು. ವಿಪಕ್ಷಗಳು ಟೀಕಿಸಲಿ ತಲೆ ಕೆಡಿಸಿಕೊಳ್ಳುವುದಿಲ್ಲ, ನೀರಿನ ದರ ಹೆಚ್ಚಳ ಮಾಡ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ನೀರಿನ ದರದ ಬಗ್ಗೆ ಮಾಹಿತಿ ಕೊಡಿ. ಎಷ್ಟು ವರ್ಷಗಳಿಂದ ನೀರಿನ ದರ ಹೆಚ್ಚಿಸಿಲ್ಲ ಎಂದು ಮಾಹಿತಿ ಕೊಡಿ ಎಂಬುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ವೇದಿಕೆ ಮೇಲೆಯೇ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ 8–9 ವರ್ಷದಿಂದ ನೀರಿನ ದರ ಏರಿಕೆ ಮಾಡಿಲ್ಲ. ನೀರಿನ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗಬೇಕು. ಮಂಡಳಿ ನಷ್ಟದಲ್ಲಿದೆ, ಸಂಬಳ ಕೊಡುವುದಕ್ಕೆ ಆಗುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ಸ್ಪಷ್ಟನೆ ನೀಡಿದರು.
ಎಷ್ಟು ದರ ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧಾರ ಮಾಡಿಲ್ಲ. ಕಮಿಟಿ ಸಭೆ, ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಇಂದಿನ ಸಂಪುಟ ಸಭೆಯಲ್ಲಿ ನೀರಿನ ದರ ಹೆಚ್ಚಳ ವಿಷಯ ಪ್ರಸ್ತಾಪವಿಲ್ಲ ಎಂದು ಇದೇ ವೇಳೆ ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q