ಉಗ್ರರ ಉದ್ದೇಶ ವಿಫಲಗೊಳಿಸಲು ಪ್ರತಿಯೊಬ್ಬ ಭಾರತೀಯರೂ ಒಗ್ಗಟ್ಟಾಗಿರಿ: ರಾಹುಲ್ ಗಾಂಧಿ ಕರೆ

ಶ್ರೀನಗರ: ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ವೇಳೆ ಗಾಯಗೊಂಡ ಪ್ರವಾಸಿಗರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ ರಾಹುಲ್ ದಾಳಿಯ ಕುರಿತ ವಿವರಗಳನ್ನು ಪಡೆದರು.
ಗಾಯಾಳುಗಳ ಭೇಟಿಯ ಬಳಿಕ ಮಾತನಾಡಿದ ಅವರು, ಉಗ್ರರ ಈ ದಾಳಿಯ ಹಿಂದಿನ ಉದ್ದೇಶ ಸಮಾಜವನ್ನು ವಿಭಜಿಸುವುದು. ಇದು ಒಂದು ಭಯಾನಕ ದುರಂತ. ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಹಾಗೂ ದಾಳಿಯ ಕುರಿತ ಮಾಹಿತಿ ಪಡೆಯಲು ಆಗಮಿಸಿದ್ದೇನೆ ಎಂದು ಹೇಳಿದರು.
ಉಗ್ರರ ವಿರುದ್ಧ ಸರ್ಕಾರ ಕೈಗೊಳ್ಳುವ ಎಲ್ಲಾ ನಿರ್ಧಾರಗಳಿಗೆ ನಮ್ಮ ಬೆಂಬಲವಿದೆ. ಸಮಾಜವನ್ನು ವಿಭಜಿಸುವುದೇ ಉಗ್ರರ ಈ ದಾಳಿಯ ಹಿಂದಿನ ಉದ್ದೇಶ. ಉಗ್ರರ ಈ ಪ್ಲ್ಯಾನ್ ವಿಫಲಗೊಳಿಸಲು ಪ್ರತಿಯೊಬ್ಬ ಭಾರತೀಯನೂ ಒಗ್ಗಟ್ಟಿನಿಂದಿರುವುದು ಬಹಳ ಮುಖ್ಯ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: