ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ
ಲಕ್ನೋ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಐಪಿಎಸ್ ಅಧಿಕಾರಿ ಅಸಿಮ್ ಅರುಣ್ ಅವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಾನ್ಪುರದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಸಿಮ್ ಅರುಣ್ ಅವರು ಈ ತಿಂಗಳ ಆರಂಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಲಕ್ನೋದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿದ ಅವರು, ರಾಷ್ಟ್ರದ ಅಭಿವೃದ್ಧಿಗೆ ಹೊಸ ಮಾರ್ಗವನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಂದ ನಾನು ಪ್ರಭಾವಿತನಾಗಿದ್ದೇನೆ. ಸಾಮಾಜಿಕ ಕಾರ್ಯಗಳಿಗೆ ಹೆಚ್ಚಿನ ಕೊಡುಗೆ ನೀಡಲು ರಾಜಕೀಯಕ್ಕೆ ಸೇರಲು ಬಿಜೆಪಿ ನನಗೆ ಸಲಹೆ ನೀಡಿದೆ. ನನ್ನ ಕೆಲಸದ ಅವಧಿಯಲ್ಲಿ ನಾನು ಮಾಡಲು ಸಾಧ್ಯವಾಗದಿರುವುದು ಬಹಳಷ್ಟಿದೆ. ಹಾಗಾಗಿ, ನಾನು ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆ. 10, 14, 20, 23, 27 ಮತ್ತು ಮಾ. 3 ಮತ್ತು 7ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾ. 10ರಂದು ಮತ ಎಣಿಕೆ ನಡೆಯಲಿದೆ.
ಮೊನ್ನೆಯಷ್ಟೇ ಬಿಜೆಪಿ ತನ್ನ 107 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ 20 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ ಮತ್ತು 21 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಟೆಸ್ಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ದಿಢೀರ್ ರಾಜೀನಾಮೆ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದೇನು?
ಪ್ರಚೋದನಾಕಾರಿ ಭಾಷಣ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಬಂಧನ
ಚುನಾವಣಾ ಆಯೋಗದಿಂದ ಜ. 22ರವರೆಗೆ ರೋಡ್ ಶೋ, ರ್‍ಯಾಲಿ ಮೇಲಿನ ನಿಷೇಧ ವಿಸ್ತರಣೆ
ಇಬ್ಬರು ವಕೀಲರಿಗೆ 2 ತಿಂಗಳು ಜೈಲು ಶಿಕ್ಷೆ ನೀಡಿದ ಹೈಕೋರ್ಟ್
ಚಲಿಸುತ್ತಿದ್ದ ಬಸ್ಸಿನಲ್ಲೇ ಮೂರ್ಛೆ ಹೋದ ಚಾಲಕ: ಜನರ ಪ್ರಾಣ ಉಳಿಸಿದ ಮಹಿಳೆ