ಪರೀಕ್ಷಾ ಕೇಂದ್ರದಲ್ಲಿಯೇ ಹೃದಯಾಘಾತ: ವಿದ್ಯಾರ್ಥಿನಿ ಸಾವು
ಮೈಸೂರು: ಇಂದಿನಿಂದ ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಯ ಮೊದಲ ದಿನದಂದೇ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ತಿ.ನರಸೀಪುರ ತಾಲ್ಲೂಕಿನ ವಿದ್ಯೋದಯ ಜೂನಿಯರ್ ಕಾಲೇಜಿಗೆ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ತಿ.ನರಸೀಪುರ ತಾಲ್ಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪರೀಕ್ಷಾ ಕೊಠಡಿಗೆ ಆಗಮಿಸಿದ್ದ ವಿದ್ಯಾರ್ಥಿನಿ 5 ನಿಮಿಷ ಪರೀಕ್ಷೆ ಬರೆದಿದ್ದಳು. ಬಳಿಕ ಪರೀಕ್ಷಾ ಕೇಂದ್ರದಲ್ಲೇ ಕುಸಿದು ಬಿದ್ದಿದ್ದಾಳೆ.
ಈ ವೇಳೆ ಸಿಬ್ಬಂದಿ ತಕ್ಷಣವೇ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಕೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಜನರನ್ನು ಆತಂಕ್ಕೆ ಸಿಲುಕಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಲಂಚದ ಆರೋಪ: ನಾವೆಲ್ಲ ಈಶ್ವರಪ್ಪ ಜೊತೆಗಿದ್ದೇವೆ ಎಂದ ರೇಣುಕಾಚಾರ್ಯ!
ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ಧರಿಸಿ ಬಂದಿದ್ದ ಶಿಕ್ಷಕಿ ಅಮಾನತು
ಉತ್ತರ ಪ್ರದೇಶ: ಕ್ರಿಮಿನಲ್ ಗಳಿಗೆ ಎನ್ ಕೌಂಟರ್ ಭೀತಿ, ಜನರಿಗೆ ಬುಲ್ಡೋಜರ್ ಭೀತಿ
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದ.ಕ. ಅಧ್ಯಕ್ಷರಾಗಿ ಕೆ.ಎಂ.ಫಯಾಝ್ ಆಯ್ಕೆ
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ