ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರಿಂದ ದಾಳಿ: 4 ಲೀಟರ್ ಕಳ್ಳಭಟ್ಟಿ ವಶ

ಕೊಟ್ಟಿಗೆಹಾರ: ಮಲೆಮನೆ ಗ್ರಾಮದ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು, 4 ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಮಲೆಮಲೆ ಗ್ರಾಮದ ರೂಪ ಎಂಬುವವರಿಗೆ ಸೇರಿದ ಮನೆ ಹಾಗೂ ಕಾಫಿ ತೋಟದ ಮೇಲೆ ದಾಳಿ ನಡೆಸಿದ್ದ ಪೊಲೀಸರು 300 ಲೀಟರ್ ಬೆಲ್ಲದ ಕೊಳೆ, 4 ಲೀಟರ್ ಕಳ್ಳಭಟ್ಟಿ ಸರಾಯಿ ವಶಪಡಿಸಿಕೊಂಡು ಆರೋಪಿಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ, ಸಿಬ್ಬಂದಿಗಳಾದ ಮಲ್ಲಪ್ಪ ಹೆಗ್ಗಣವರ್, ರಮೇಶ್, ಶಿವಣ್ಣ, ವಾಹನ ಚಾಲಕ ಸತೀಶ್ ಕುಮಾರ್ ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw