ಮಹದೇವ್ ಬೆಟ್ಟಿಂಗ್ ಆ್ಯಪ್ ಸ್ಥಾಪಕರ ಇಬ್ಬರು ಸಹಚರರನ್ನು ಬಂಧಿಸಿದ ತನಿಖಾ ಸಂಸ್ಥೆ
ಮಹಾದೇವ್ ಆನ್ ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇನ್ನೂ ಇಬ್ಬರನ್ನು ಬಂಧಿಸಿದೆ.
ಮಾರ್ಚ್ 2 ರಂದು ತನಿಖಾ ಸಂಸ್ಥೆಯು ಗಿರೀಶ್ ತಲ್ರೇಜಾ ಅವರನ್ನು ಬಂಧಿಸಿತ್ತು. ನಂತರ ಮಾರ್ಚ್ 3 ರಂದು ಸೂರಜ್ ಚೋಖಾನಿ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿತ್ತು. ನಂತರ ಆರೋಪಿಗಳನ್ನು ರಾಯ್ ಪುರದ ಪಿಎಂಎಲ್ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಲ್ಲಿ ಅವರನ್ನು ಮಾರ್ಚ್ 11 ರವರೆಗೆ ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಯಿತು.
ಬಂಧಿತ ವ್ಯಕ್ತಿಗಳು ವಿವಾದಾತ್ಮಕ ಆನ್ ಲೈನ್ ಜೂಜಿನ ಅಪ್ಲಿಕೇಶನ್ ನ ಪ್ರವರ್ತಕರಾದ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರ ನಿಕಟ ಸಹವರ್ತಿಗಳು ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth