ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದ ಶಾಸಕ - Mahanayaka
6:04 PM Wednesday 30 - October 2024

ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದ ಶಾಸಕ

01/12/2020

ಚಾರ್ಖಿ ದಾದ್ರಿ: ದೇಶಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ  ಶಾಸಕ ಸಾಂಬೀರ್ ಸಾಂಗ್ವಾನ್ ಅವರು ಭಾರತೀಯ ಜನತಾ ಪಾರ್ಟಿ ನೇತೃತ್ವದ ಹರ್ಯಾಣ ಸರ್ಕಾರಕ್ಕೆ ತಾವು ನೀಡಿದ ಬೆಂಬಲವನ್ನು ಮಂಗಳವಾರ ವಾಪಸ್ ಪಡೆದಿದ್ದಾರೆ.


ಸ್ವತಂತ್ರ ಶಾಸಕರಾಗಿರುವ ಸಾಂಬೀರ್ ಸಾಂಗ್ವಾನ್ ಅವರು,  ದೆಹಲಿ-ಹರ್ಯಾಣದ ‘ಟರ್ಕಿ’ ಗಡಿಯಲ್ಲಿ ರೈತ ಪ್ರತಿಭಟನಾಕಾರರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ರೈತರ ಹೋರಾಟದಲ್ಲಿ ಸೇರ್ಪಡೆಗೊಂಡಿದ್ದಾರೆ. ನಾನು ಬಿಜೆಪಿಗೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದು, ಟರ್ಕಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ನಾನು ಭಾಗಿಯಾಗುತ್ತೇನೆ ಎಂದು ಹೇಳಿದ್ದಾರೆ.

ನೂತನ ಕೃಷಿ ಮಸೂದೆಯನ್ನು ವಿರೋಧಿಸಿದ ಅವರು, ಹರ್ಯಾಣ ಬಿಜೆಪಿ ಸರ್ಕಾರದ ರಾಜ್ಯ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಕೂಡ ರಾಜೀನಾಮೆ ನೀಡಿದ್ದಾರೆ. ಇದೇ ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಕೂಡ ಸೇರಿಕೊಂಡಿದ್ದು,  ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ರೈತರು ತಮ್ಮ ಟ್ರಾಕ್ಟರ್ ಬಳಸಿ ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಇತ್ತೀಚಿನ ಸುದ್ದಿ