ನನ್ನನ್ನು ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ಬಿಡುಗಡೆ ಮಾಡ್ತೀನಿ: ಯತ್ನಾಳ್ ಸ್ಫೋಟಕ ಹೇಳಿಕೆ - Mahanayaka

ನನ್ನನ್ನು ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ಬಿಡುಗಡೆ ಮಾಡ್ತೀನಿ: ಯತ್ನಾಳ್ ಸ್ಫೋಟಕ ಹೇಳಿಕೆ

yathnall
26/12/2023

ಬೆಂಗಳೂರು: ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.


Provided by

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ

ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

 

ಇತ್ತೀಚಿನ ಸುದ್ದಿ