ಅನ್ಯ ಧರ್ಮದ ಯುವತಿಯರನ್ನ ಪ್ರೀತಿಸಿ ಮದುವೆಯಾಗಿ: ಹಿಂದೂ ಯುವಕರಿಗೆ ಚಕ್ರವರ್ತಿ ಸೂಲಿಬೆಲೆ ಕರೆ

10/03/2025
ಮಂಗಳೂರು: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ.
ಮಂಗಳೂರಿನ ಕುತ್ತಾರು ಕೊರಗಜ್ಜನ ಸನ್ನಿಧಾನದಲ್ಲಿ ಪಾದಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಮತಾಂತರ ಎಂದು ಬಡಿದಾಡಿದ್ದು ಸಾಕು, ಈಗ ಹಿಂದೂ ಧರ್ಮಕ್ಕೆ ಘರ್ ವಾಪಸಿ ಮಾಡೋ ಬಗ್ಗೆ ಮಾತನಾಡಿ, ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡುಮಕ್ಕಳಿಗೆ ಕೇಳೋಣ ಎಂದರು.
ನಾವು ಆಕ್ರಮಣ ಕಾರಿಯಾಗಿ ಆಟವಾಡಬೇಕು, ರಕ್ಷಣಾತ್ಮಕವಾಗಿ ಆಡಿದ್ದು ಸಾಕು, ಟೆಸ್ಟ್ ಮ್ಯಾಚ್ ನಿಂತು ಹೋಯ್ತು ಈಗ ಟ್ವಿಂಟಿ ಟ್ವಿಂಟಿ ಆಡೋ ಸಮಯ ಎಂದು ಅವರು ಕರೆ ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: