ಮಾನಸಿಕ ಅಸ್ವಸ್ಥ ಮುಸ್ಲಿಂ ಯುವತಿಯನ್ನು ಸ್ವೀಕರಿಸಲು ಒಪ್ಪದ ಕುಟುಂಬ: ಸೂಕ್ತ ಕ್ರಮಕ್ಕೆ ವಿಶು ಶೆಟ್ಟಿ ಆಗ್ರಹ

aesha banu
07/08/2023

ಉಡುಪಿ : ತಿಂಗಳ ಹಿಂದೆ ಮಣಿಪಾಲದ ಸಾರ್ವಜನಿಕ ಸ್ಥಳದಲ್ಲಿ ಅತಿರೇಕವಾಗಿ ವರ್ತಿಸುತ್ತಿದ್ದ ಕೇರಳ ಮೂಲದ ಮುಸ್ಲಿಂ ಯುವತಿಯನ್ನು ಮಣಿಪಾಲ ಪೊಲೀಸರ ಮನವಿ ಮೇರೆಗೆ ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಬಾಳಿಗಾ ಆಸ್ಪತ್ರೆಗ ದಾಖಲಿಸಿದ್ದು, ಇದೀಗ ಯುವತಿಯ ಸಂಬಂಧಿಕರು ಪತ್ತೆಯಾಗಿದ್ದರೂ, ಅವರು ಆಕೆಯನ್ನು ಸ್ವೀಕರಿಸಲು ಒಪ್ಪದಿರುವುದು ದೊಡ್ಡ ಸಮಸ್ಯೆಗೆ ಕಾರಣವಾಗಿದೆ.

ಸಂಬಂಧ ಪಟ್ಟ ಇಲಾಖೆಗಳು ಯುವತಿಯ ಸಂಬಂಧಿಕರ ಮನವೊಲಿಸಬೇಕು ಇಲ್ಲವೇ ಅವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿಶು ಶೆಟ್ಟಿ ಆಗ್ರಹಿಸಿದ್ದಾರೆ.

ಯುವತಿ ಆಯೇಷಾ ಬಾನು (3೦) ತಂದೆ ಹೆಸರು ಅಬ್ದುಲ್ ಕರೀಂ ಕೇರಳದ ತ್ರಿಶುರ್ ನವರಾಗಿದ್ದು,ಪ್ರಸ್ತುತ ಯುವತಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರು ನೀಡಿದ ಮಾಹಿತಿಯಂತೆ ಆಕೆಯ ತಾಯಿ ಹಾಗೂ ಸಹೋದರನ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅವರು ಯುವತಿಯನ್ನು ಸ್ವೀಕರಿಸಲು ಒಪ್ಪುತ್ತಿಲ್ಲ. ಯುವತಿಯನ್ನು ಆಸ್ಪತ್ರೆಯಲ್ಲಿಯೇ ಬಿಡಲು ಸಾಧ್ಯವೇ ? ಅದ್ದರಿಂದ ಯುವತಿಯ ಹಿತದೃಷ್ಟಿಯಿಂದ ಸಂಬಂಧ ಪಟ್ಟ ಇಲಾಖೆಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ವಿಶು ಶೆಟ್ಟಿ ಮನವಿ ಮಾಡಿದ್ದಾರೆ.

ಯುವತಿಗೆ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಯ ವೆಚ್ಚಕ್ಕೆ ಆಕೆಯನ್ನು ದಾಖಲಿಸಿದ ನಾನೇ ಜವಾಬ್ದಾರಿ . ಇದರ ನಡುವೆ ಆಕೆಯ ಕುಟುಂಬಸ್ಥರ ಅಮಾನವೀಯ ನಡೆ ತುಂಬಾ ನೋವನ್ನುಂಟು ಮಾಡಿದೆ. ಯುವತಿಗೆ ಮುಂದಿನ ಅಶ್ರಯ ನೀಡುವುದು ದೊಡ್ಡ ಸವಾಲಾಗಿದ್ದು, ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮ ಜರುಗಿಸಿ ಯುವತಿಗೆ ನ್ಯಾಯ ಒದಗಿಸುವಂತೆ ವಿಶು ಶೆಟ್ಟಿ ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version