ಬೆಳ್ಳಂ ಬೆಳಗ್ಗೆ ಕಾಡಾನೆ ದಾಳಿಗೆ ರೈತ ಬಲಿ
ರಾಮನಗರ: ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಬಲಿಯಾದ ಘಟನೆ ಭಾನುವಾರ ಬೆಳಗ್ಗೆ ಕನಕಪುರ ತಾಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕರಿಯಪ್ಪ(65) ಮೃತಪಟ್ಟ ರೈತರಾಗಿದ್ದಾರೆ. ಜಮೀನಿನಲ್ಲಿ ಹಾಕಿದ್ದ ಮೆದೆ ನೋಡಲು ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದರು. ಆದರೆ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮತ್ತೆ ಮುಂದುವರಿದಿದ್ದು, ಇದೀಗ ರೈತರೊಬ್ಬರು ಬಲಿಯಾಗಿದ್ದಾರೆ.
ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಕರಿಯಪ್ಪನವರ ಮೃತದೇಹವನ್ನು ಕನಕಪುರ ಆಸ್ಪತ್ರೆಗೆ ರವಾನಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: