ಇಂದು ದೆಹಲಿಗೆ ರೈತರ ಪ್ರತಿಭಟನಾ ಮೆರವಣಿಗೆ: ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹೆಚ್ಚಿದ ಆಕ್ರೋಶ
ಪಂಜಾಬ್ ಮತ್ತು ಹರಿಯಾಣದ ಪ್ರತಿಭಟನಾ ನಿರತ ರೈತರ ಗುಂಪೊಂದು ಭಾನುವಾರ ದೆಹಲಿಗೆ ತೆರಳಲಿದ್ದಾರೆ. ರೈತ ನಾಯಕರು, ಕೇಂದ್ರ ಸರ್ಕಾರವು ನಮಗೆ ಪ್ರತಿಕ್ರಿಯೆ ಕೊಡುತ್ತಿಲ್ಲ ಮತ್ತು ಚರ್ಚೆಗಳಲ್ಲಿ ತೊಡಗಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ. ದೆಹಲಿ ತಲುಪುವ ಅವರ ಹೊಸ ಪ್ರಯತ್ನದ ನಿರೀಕ್ಷೆಯಲ್ಲಿ, ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅವರ ಮುನ್ನಡೆಯನ್ನು ತಡೆಯಲು ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ.
ಮೊನ್ನೆ ಕೂಡಾ ರೈತರು ರಾಷ್ಟ್ರ ರಾಜಧಾನಿಯತ್ತ ಹೋಗಲು ಪ್ರಯತ್ನಿಸಿದ್ದರು. ಆದರೆ ಗಡಿಯಲ್ಲಿ ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್ ಗಳನ್ನು ಹಾರಿಸಿದಾಗ ಹಲವಾರು ಪ್ರತಿಭಟನಾಕಾರರು ಗಾಯಗೊಂಡ ನಂತರ ಅವರ ಪ್ರಯತ್ನವನ್ನು ಸ್ಥಗಿತಗೊಳಿಸಲಾಗಿತ್ತು.
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ತಮ್ಮ ಕಳವಳಗಳು ಮತ್ತು ಬೇಡಿಕೆಗಳ ಬಗ್ಗೆ ಕೇಂದ್ರದಿಂದ ಮಾತುಕತೆಗಾಗಿ ಯಾವುದೇ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿಲ್ಲ ಎಂದು ರೈತ ನಾಯಕ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ. 101 ರೈತರ ಗುಂಪು ಡಿಸೆಂಬರ್ 8 ರಂದು ದೆಹಲಿಗೆ ತಮ್ಮ ಮೆರವಣಿಗೆಯನ್ನು ಪುನರಾರಂಭಿಸಲಿದೆ ಎಂದು ಅವರು ಶನಿವಾರ ಘೋಷಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj