ರಾಹುಲ್ ಗಾಂಧಿ ಭೇಟಿ ನಂತರ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ: ಫಾರೂಕ್ ಅಬ್ದುಲ್ಲಾ ಘೋಷಣೆ
ಫಾರೂಕ್ ಅಬ್ದುಲ್ಲಾ ಅವರು ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವೆ ಚುನಾವಣಾ ಪೂರ್ವ ಮೈತ್ರಿಯನ್ನು ಘೋಷಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗಲಿರುವ ವಿಧಾನಸಭಾ ಚುನಾವಣೆಯ ನಿರೀಕ್ಷೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ಸಿಪಿಐ (ಎಂ) ನೊಂದಿಗೆ ಚುನಾವಣಾ ಪೂರ್ವ ಮೈತ್ರಿಯನ್ನು ಘೋಷಿಸಿದೆ.
ಜಮ್ಮುವಿಗೆ ತೆರಳುವ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ರೀನಗರದಲ್ಲಿರುವ ಫಾರೂಕ್ ಅಬ್ದುಲ್ಲಾ ಅವರ ನಿವಾಸಕ್ಕೆ ಭೇಟಿ ನೀಡಿದರು. ರಾಹುಲ್ ಎರಡು ದಿನಗಳ ಕೇಂದ್ರಾಡಳಿತ ಪ್ರದೇಶ ಪ್ರವಾಸದಲ್ಲಿದ್ದರು.
ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಮತ್ತು ಪಕ್ಷದ ಹಲವಾರು ಮುಖಂಡರು ಉಪಸ್ಥಿತರಿದ್ದರು.
ರಾಹುಲ್ ಗಾಂಧಿ ಅಬ್ದುಲ್ಲಾ ನಿವಾಸದಿಂದ ನಿರ್ಗಮಿಸಿದ ಸ್ವಲ್ಪ ಸಮಯದ ನಂತರ, ಫಾರೂಕ್ ಅಬ್ದುಲ್ಲಾ ಮಾಧ್ಯಮಗಳನ್ನುದ್ದೇಶಿಸಿ ಮುಂಬರುವ ಚುನಾವಣೆಗೆ ಕಾಂಗ್ರೆಸ್ ಮತ್ತು ಸಿಪಿಐ (ಎಂ) ನೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ನ ಚುನಾವಣಾ ಪೂರ್ವ ಮೈತ್ರಿಯನ್ನು ಘೋಷಿಸಿದರು.
ಎಲ್ಲಾ 90 ವಿಧಾನಸಭಾ ಸ್ಥಾನಗಳಲ್ಲಿ ಉಭಯ ಪಕ್ಷಗಳ ನಡುವೆ ಮೈತ್ರಿ ಇರುತ್ತದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷರು ಹೇಳಿದರು. ಇಂದು ರಾತ್ರಿಯ ವೇಳೆಗೆ ಕಾಗದಪತ್ರಗಳು ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್, ಎನ್ಸಿ ಮತ್ತು ಸಿಪಿಐ (ಎಂ) ಕೈಜೋಡಿಸಲಿವೆ. ನಮ್ಮ ಪ್ರಯತ್ನಗಳಲ್ಲಿ ನಾವು ಒಗ್ಗಟ್ಟಾಗಿದ್ದೇವೆ ಮತ್ತು ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುತ್ತೇವೆ. ರಾಜ್ಯ ಸ್ಥಾನಮಾನವನ್ನು ಪುನರ್ ಸ್ಥಾಪಿಸಲಾಗುವುದು ಎಂದು ನಾವು ಆಶಾವಾದಿಯಾಗಿದ್ದೇವೆ. ನಮ್ಮ ಬಾಗಿಲುಗಳು ಎಲ್ಲರಿಗೂ ತೆರೆದಿರುತ್ತವೆ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth