ಬಸ್—ಓಮ್ನಿ ನಡುವೆ ಭೀಕರ ಅಪಘಾತ: ಮೂವರು ಸಾವು

11/04/2024
ಶಿವಮೊಗ್ಗ: ವಾಯವ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಓಮ್ನಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ–ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ–ಬಿದರಹಳ್ಳಿಯಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತವಾದ ಬಸ್ ನಲ್ಲಿದ್ದ ಕೆಲವರಿಗೂ ಗಾಯಗಳಾಗಿದ್ದು, ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಶಿಕಾರಿಪುರದ ಹರಮಘಟ್ಟದ ನಂಜುಂಡಪ್ಪ, ರಾಕೇಶ್ ಹಾಗೂ ದೇವರಾಜ್ ಎಂದು ಗುರುತಿಸಲಾಗಿದೆ. ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth