ಭೀಕರ ಅಪಘಾತದಲ್ಲಿ ತಂದೆ—ಮಗ ಸಾವು!

ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ ತಂದೆ ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಮೂಲದ ತಂದೆ ಗಂಗಿರೆಡ್ಡಿ (41), ಮಗ ಆದರ್ಶ (21) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಸ್ವಗ್ರಾಮ ಹರಿಗಾರಗುಡ್ಡಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮುಂದೆ ಹೋಗುತ್ತಿದ್ದ ವಾಹನವೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth