ಮಾವನಿಂದಲೇ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನ: ವಿಫಲವಾದಾಗ ಸೊಸೆಯ ಬರ್ಬರ ಹತ್ಯೆ
ರಾಯಚೂರು: ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮಾವ, ತನ್ನ ಪ್ರಯತ್ನ ವಿಫಲಗೊಂಡ ವೇಳೆ ಆಕೆಯನ್ನು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಜುಲಮಗೇರಾ ಗ್ರಾಮದಲ್ಲಿ ನಡೆದಿದೆ.
ದುಳ್ಳಮ್ಮ(27) ಹತ್ಯೆಯಾದ ಮಹಿಳೆಯಾಗಿದ್ದಾರೆ. ರಾಮಲಿಂಗಯ್ಯ ಎಂಬಾತ ತನ್ನ ಸೊಸೆಯ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.
ಇದಕ್ಕೂ ಮುಂಚೆ 2—3 ಬಾರಿ ಸೊಸೆಯ ಮೇಲೆ ಮಾವ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಆ ವೇಳೆ ಗ್ರಾಮದ ಹಿರಿಯರು, ಕುಟುಂಬಸ್ಥರು ಆತನಿಗೆ ಬುದ್ಧಿವಾದ ಹೇಳಿದ್ದರು. ಆದರೂ ಬದಲಾಗದ ರಾಮಲಿಂಗಯ್ಯ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ತನ್ನ ಸೊಸೆಯ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದ. ಈ ವೇಳೆ ಸೊಸೆ ನಿರಾಕರಿಸಿದಾಗ ಸಲಾಕೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ನಡೆಸಿ, ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಯ ಬಂಧನಕ್ಕೆ ಬಲೆಬೀಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97