ಆ್ಯಂಬುಲೆನ್ಸ್ ವ್ಯವಸ್ಥೆ ಇಲ್ಲದೇ ಮಗಳ ಮೃತದೇಹವನ್ನು ಬೈಕ್ ನಲ್ಲೇ ಗ್ರಾಮಕ್ಕೆ ಸಾಗಿಸಿದ ತಂದೆ!
ಭೋಪಾಲ್: ಆಸ್ಪತ್ರೆಯವರು ಆ್ಯಂಬುಲೆನ್ಸ್ ಒದಗಿಸದ ಹಿನ್ನೆಲೆಯಲ್ಲಿ ಮಗಳ ಮೃತಹದೇಹವನ್ನು ತಂದೆ ಸುಮಾರು 70 ಕಿ.ಮೀ. ದೂರದಲ್ಲಿರುವ ತಮ್ಮ ಗ್ರಾಮಕ್ಕೆ ಬೈಕ್ ನಲ್ಲಿ ಸಾಗಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಶಹದೋಲ್ ನಿಂದ ಸುಮಾರು 70 ಕಿ.ಮೀ. ದೂರದಲ್ಲಿರುವ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್ ಅವರ ಮಗಳು ಮಾಧುರಿ ಸೋಮವಾರ ರಾತ್ರಿ ರಕ್ತ ಹೀನತೆಯಿಂದಾಗಿ ಶಹದೋಲ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಈ ವೇಳೆ ಮೃತದೇಹವನ್ನು ಗ್ರಾಮಕ್ಕೆ ಸಾಗಿಸಲು ವಾಹನ ವ್ಯವಸ್ಥೆ ನೀಡುವಂತೆ ಶಹದೋಲ್ ಸರ್ಕಾರಿ ಆಸ್ಪತ್ರೆ ಅಧಿಕಾರಿಗಳಿಗೆ ಮನವಿ ಮಾಡಿದಾಗ, ನಮ್ಮಲ್ಲಿ 15 ಕಿ.ಮೀ. ವ್ಯಾಪ್ತಿಗೆ ಮಾತ್ರವೇ ಆ್ಯಂಬುಲೆನ್ಸ್ ಸೌಲಭ್ಯವಿದೆ. ಅದಕ್ಕಿಂತ ಹೆಚ್ಚಿನ ದೂರಕ್ಕೆ ಆ್ಯಂಬುಲೆನ್ಸ್ ನೀಡಲಾಗುವುದಿಲ್ಲ, ಮೃತದೇಹ ಸಾಗಿಸಲು ನೀವೇ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಲು ಹಣವಿಲ್ಲದ ಕಾರಣ ಕೊನೆಗೆ ನಾವು ಬೈಕ್ ನಲ್ಲಿಯೇ ಮೃತದೇಹವನ್ನು ಗ್ರಾಮಕ್ಕೆ ಸಾಗಿಸಿದ್ದೇವೆ ಎಂದು ತಂದೆ ಲಕ್ಷ್ಮಣ್ ಸಿಂಗ್ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw