ನಾನು ಪ್ರಾಣಿ ಹತ್ಯೆ ನಿಷೇಧದ ಪರ: ಸಚಿವ ರಾಮಲಿಂಗ ರೆಡ್ಡಿ

ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರ ಸದ್ಯ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ. ಲೋಕಸಭಾ ಚುನಾವಣೆ ಸಮೀಪವಿದ್ದು, ಮುಂದಿನ ಚುನಾವಣೆಗೆ ಬಿಜೆಪಿ ಈ ವಿಚಾರವನ್ನು ಪ್ರಮುಖ ವಿಚಾರವಾಗಿಸಿ ಹೋರಾಟ ನಡೆಸಲು ಮುಂದಾಗಿದೆ. ಈ ನಡುವೆ ಸಚಿವ ರಾಮಲಿಂಗ ರೆಡ್ಡಿ ಗೋಹತ್ಯೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಬಹಳ ಹಿಂದೆನೇ ಹೇಳಿದ್ದೀನಿ, ಬಿಜೆಪಿಯವರು ಗೋಹತ್ಯೆ ನಿಷೇಧದ ಬಗ್ಗೆ ಮಾತನಾಡ್ತಾರೆ, ಎಲ್ಲಾ ಪ್ರಾಣಿಗಳ ಹತ್ಯೆ ನಿಷೇಧ ಮಾಡಬೇಕು ಎಂದು ವಾದ ಮಾಡುವವನು ನಾನು ಎಂದರು.
84 ಲಕ್ಷ ಜೀವ ರಾಶಿಗಳನ್ನೂ ಹತ್ಯೆ ಮಾಡಬಾರದೆಂಬುದು ನನ್ನ ನಿಲುವು. 84 ಲಕ್ಷ ಜೀವರಾಶಿಗಳಿಗೂ ಬದುಕುವ ಹಕ್ಕಿದೆ ಎಂದು ರಾಮಲಿಂಗ ರೆಡ್ಡಿ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw