ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ವಿಶೇಷ ಆತಿಥ್ಯ ನೀಡಲಾಗಿಲ್ಲ: ಎನ್. ಶಶಿಕುಮಾರ್ ಸ್ಪಷ್ಟನೆ

n shashi kumar
09/08/2022

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸುರತ್ಕಲ್ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಲಾಗಿಲ್ಲ. ಈ ಬಗ್ಗೆ ಸುರತ್ಕಲ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

ಮಂಗಳೂರಲ್ಲಿ ಮಾತನಾಡಿದ ಅವರು, ಈ ಬಗ್ಗೆ ಕೆಲವು ಪ್ರಮುಖರು ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳನ್ನು ನಿಯಮ ಅನುಸಾರವೇ ವ್ಯವಹರಿಸಲಾಗಿದೆ. ಯಾವ ಆಧಾರದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆಂದು ಗೊತ್ತಾಗಿಲ್ಲ ಎಂದರು.

ನಾನು ಸೋಮವಾರ ಬೆಳಗ್ಗೆಯೂ ಮುಹಮ್ಮದ್ ಫಾಝಿಲ್ ಮನೆ ಬಳಿ ಹೋಗಿದ್ದೆ. ಈ ವೇಳೆ ಅಲ್ಲಿ ಮಾತನಾಡಲು ಗಂಡಸರು ಯಾರೂ ಇರಲಿಲ್ಲ. ಅವರ ಕುಟುಂಬದ ಬಹುತೇಕ ಸದಸ್ಯರಲ್ಲಿ ನನ್ನ ಹಾಗೂ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್‌ ಗಳಿವೆ. ಹಾಗಾಗಿ ಇಂತಹ ಆಧಾರರಹಿತ ಹೇಳಿಕೆ ನೀಡುವ ಬದಲು ಅಂತಹದ್ದೇನಾದರೂ ಇದ್ದಲ್ಲಿ ನಮ್ಮ ಗಮನಕ್ಕೆ ತರಬಹುದು ಎಂದರು.

ಮುಹಮ್ಮದ್ ಫಾಝಿಲ್ ಕೊಲೆ ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪ್ರಕರಣವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳನ್ನು ರಾಜಾರೋಷವಾಗಿ ತಿರುಗಾಡಲು ಬಿಡುವ ಪ್ರಮೇಯವೇ ಇಲ್ಲ ಎಂದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version