ಫಾಜಿಲ್ ಹತ್ಯೆ ಪ್ರಕರಣ: ಕಾರಿನ ಮಾಲಿಕನನ್ನು ಬಂಧಿಸಲಾಗಿದೆ: ಕಮಿಷನರ್ ಶಶಿಕುಮಾರ್ - Mahanayaka

ಫಾಜಿಲ್ ಹತ್ಯೆ ಪ್ರಕರಣ: ಕಾರಿನ ಮಾಲಿಕನನ್ನು ಬಂಧಿಸಲಾಗಿದೆ: ಕಮಿಷನರ್ ಶಶಿಕುಮಾರ್

shashikumar
31/07/2022

ADS


Provided by

ಮಂಗಳೂರು: ಸುರತ್ಕಲ್ ಫಾಜಿಲ್ ಹತ್ಯೆಗೆ ಬಳಸಿದ್ದ ಕಾರಿನ ಮಾಲಿಕ ಅಜೀತ್ ಡಿಸೋಜ ಎಂಬವರನ್ನು ಬಂಧಿಸಲಾಗಿದ್ದು, ಅಜಿತ್‍ ಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನೊಂದಿಗೆ ಸಂಪರ್ಕ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಸಂಬಂಧ 51 ಜನರನ್ನು ವಿಚಾರಣೆ ಮಾಡಲಾಗಿದೆ. 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬಳಿಕ ಸಿಸಿಟಿವಿ ದೃಶ್ಯ ಆಧರಿಸಿ 8 ಇಯಾನ್ ಕಾರ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.


Provided by

ಸಿಸಿಟಿವಿಯಲ್ಲಿ ಕಾರಿನ ನಂಬರ್ ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಆದರೆ ಕಾರಿನ ಇತರ ಗುರುತುಗಳನ್ನು ಹಿಡಿದು ವಿಚಾರಣೆ ನಡೆಸಿ ಕಾರಿನ ಮಾಲೀಕ ಅಜಿತ್‍ನನ್ನು ಬಂಧಿಸಿದ್ದೇವೆ. ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಹಲವು ಮಾಹಿತಿಗಳು ಸಿಕ್ಕಿದೆ ಎಂದು ತಿಳಿಸಿದರು.

ಇಯಾನ್ ಕಾರ್ ಮಾಲೀಕನನ್ನು ಕೋರ್ಟ್‍ಗೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆತನಿಂದ ಯಾರು ಕಾರ್ ಬಾಡಿಗೆ ಪಡೆದಿದ್ದರು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

ಕೊಲೆಗೆ ಬಳಸಿದ ಕಾರು ಸಿಕ್ಕಿಲ್ಲ. ಅದು ಆರೋಪಿಗಳ ಬಳಿಯೇ ಇರಬಹುದು. ಆರೋಪಿಗಳು ಅಜಿತ್‍ನಿಂದ ಕಾರ್ ಬಾಡಿಗೆಗೆ ಪಡೆದಿದ್ದರು. ಫಾಜಿಲ್ ತಂದೆ ಉನ್ನತಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿ ಎಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ಇನ್ನೂ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಕೊಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡುತ್ತಿರುವವರ ವಿರುದ್ಧ 5 ಪ್ರಕರಣಗಳನ್ನು ದಾಖಲಿಸಲಾಗಿದೆ. 8 ಜನರ ತಂಡದಿಂದ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲಾಗಿದೆ ಎಂದು ಅವರು ಅವರು ಹೇಳಿದರು.

ADS

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ