ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ

ಬೆಂಗಳೂರು : ಮೇ- ಜೂನ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪ್ರಕಟಗೊಂಡಿದ್ದು, ಮುಖ್ಯ ಪರೀಕ್ಷೆಯಂತೆ ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 26 ಕೊನೆ ದಿನವಾಗಿದೆ. ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನವಾಗಿದೆ.
ಇಲಾಖೆ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದ್ದುಪೂರಕ ಪರೀಕ್ಷೆಯಲ್ಲಿ 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 50,478 ವಿದ್ಯಾರ್ಥಿಗಳು ಪಾಸ್ ಆಗಿದ್ದು, ರಾಜ್ಯದಲ್ಲಿ 32% ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದವರ ಪೈಕಿ 28,901 ಬಾಲಕರು (30.22%) ಹಾಗೂ 21,577 ಬಾಲಕಿಯರು (34.75%) ತೇರ್ಗಡೆಯಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw