ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ನಡುವೆ ಹೊಡೆದಾಟ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಗ್ರಾಮ ಪಂಚಾಯತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ.
ಗ್ರಾ.ಪಂ. ಉಪ ಚುನಾವಣೆಯಲ್ಲಿ ಗೆದ್ದವರಿಗೆ ಪಕ್ಷದ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಸನ್ಮಾನಿಸುವ ವಿಚಾರದಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ಜಿ.ಪಂ. ಮಾಜಿ ಸದಸ್ಯ ಪ್ರಕಾಶ್ ಚಂದ್ರ ಶೆಟ್ಟಿ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಯಾದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.
ಉಪ ಚುನಾವಣೆಯಲ್ಲಿ ಗೆದ್ದವರಿಗೆ ವೇದಿಕೆಯ ಮೇಲೆ ಸನ್ಮಾನ ಮಾಡಬೇಕು ಎಂದು ಪ್ರಕಾಶ್ ಚಂದ್ರ ಶೆಟ್ಟಿ ತುಂಬೆ ಸಲಹೆ ನೀಡಿದ್ದಾರೆ. ಆದರೆ ಇದನ್ನು ಒಪ್ಪದ ಹರೀಶ್ ಕುಮಾರ್, ಗೆದ್ದ ಅಭ್ಯರ್ಥಿಗಳಿಗೆ ಕುಳಿತಲ್ಲೇ ಸನ್ಮಾನ ಮಾಡಲಾಗುವುದು ಎಂದಾಗಿ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: