2 ಅಡಿ ಜಾಗಕ್ಕಾಗಿ ಎರಡು ಕುಟುಂಬದ ನಡುವೆ ಮಾರಾಮಾರಿ: ಇಬ್ಬರಿಗೆ ಗಂಭೀರ ಗಾಯ
ಚಿಕ್ಕಮಗಳೂರು: 2 ಅಡಿ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದೊಡ್ಡ ಲಿಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎರಡೂ ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಗುದ್ದಲಿ, ಕಲ್ಲು, ದೊಣ್ಣೆಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಪುರುಷರು–ಮಹಿಳೆಯರು—ಮಕ್ಕಳೆನ್ನದೇ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ.
ಮಾರಾಮಾರಿಯಲ್ಲಿ ಗಾಯತ್ರಿ ಬಾಯಿ, ಅಮರ್ ನಾಯ್ಕ್, ರಾಮನಾಯ್ಕ್ ಗೆ ಗಂಭೀರ ಗಾಯವಾಗಿದೆ. ಹಲ್ಲೆ ಮಾಡಿದ ಮಂಜಾನಾಯ್ಕ, ಉಮೇಶ್ ನಾಯ್ಕ, ಅಣ್ಣಾನಾಯ್ಕ, ತೇಜು ಪರಾರಿಯಾಗಿದ್ದಾರೆ.
ಇನ್ನೂ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲು ಲಿಂಗದಹಳ್ಳಿ ಪೊಲೀಸರು ಹಿಂದೇಟು ಹಾಕಿದ್ದರೆ ಎಂದು ಹಲ್ಲೆಗೊಳಗಾದವರು ಆರೋಪಿಸಿದ್ದಾರೆ. ಈ ಬಗ್ಗೆ ಎಸ್.ಪಿ. ಉಮಾ ಪ್ರಶಾಂತ್ ಗೆ ದೂರು ನೀಡಲು ಹಲ್ಲೆಗೊಳಗಾದವರು ಮುಂದಾಗಿದ್ದಾರೆ. ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw