‘ಬಿಜೆಪಿ ವಿರುದ್ಧ ಹೋರಾಡಿ: ಕಾದಾಟ ಯಾಕೆ’ ಎಂದ ಶಿವಸೇನಾ

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ತನ್ನ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ದೆಹಲಿ ಫಲಿತಾಂಶದ ಕುರಿತು ಪ್ರಸ್ತಾಪಿಸಿದೆ. ಬಿಜೆಪಿ ವಿರುದ್ಧ ಹೋರಾಡುವ ಬದಲು ಹೀಗೆ ಪರಸ್ಪರ ಕಾದಾಟ ಮುಂದುರಿಸುವುದಾದರೆ, ವಿರೋಧ ಪಕ್ಷಗಳ ಮೈತ್ರಿಕೂಟದ ಅಗತ್ಯವಿದೆಯೇ ಎಂದು ಪ್ರಶ್ನಿಸಿದೆ.
‘ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪರಸ್ಪರರನ್ನು ನಾಶ ಮಾಡುವುದಕ್ಕಾಗಿಯೇ ಹೋರಾಟ ನಡೆಸಿದವು. ಇದರಿಂದ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಲಭವಾಗಿ ಮುನ್ನಡೆದರು. ಹೀಗೇ ಮುಂದುವರಿಯುವುದಾದರೆ, ಮೈತ್ರಿ ಏಕೆ?’ ಎಂದು ಸಾಮ್ನಾದಲ್ಲಿ ಕೇಳಿದೆ.
ದೆಹಲಿ ಫಲಿತಾಂಶ ಪ್ರಕಟವಾದ ಬಳಿಕ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೂ, ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಗೇಲಿ ಮಾಡಿದ್ದರು. ‘ಜಗಳವಾಡುತ್ತಲೇ ಇರಿ’ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.
ಅಬ್ದುಲ್ಲಾ ಹೇಳಿಕೆಯನ್ನು ಉಲ್ಲೇಖಿಸಿರುವ ಸಾಮ್ನಾ, ದೆಹಲಿಯಲ್ಲಿ ಕನಿಷ್ಠ 14 ಸ್ಥಾನಗಳಲ್ಲಿ ಎಎಪಿ ಸೋಲಿಗೆ ಕಾಂಗ್ರೆಸ್ ಕಾರಣವಾಗಿದೆ. ಅದನ್ನು ತಪ್ಪಿಸಬಹುದಿತ್ತು ಎಂದಿದೆ. ಹಾಗೆಯೇ, ಈ ಫಲಿತಾಂಶದಿಂದ ಪಾಠ ಕಲಿಯಬೇಕಿದೆ ಎಂದು ಒತ್ತಿ ಹೇಳಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj