ಶಿವಮೊಗ್ಗ ಕ್ಷೇತ್ರದಲ್ಲಿ ಮೋದಿ ಫೋಟೋಗಾಗಿ ಫೈಟ್: ಕೋರ್ಟ್ ಮೊರೆ ಹೋದ ಈಶ್ವರಪ್ಪ!
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಸಿ ಪ್ರಚಾರ ನಡೆಸುತ್ತಿರುವ ವಿಚಾರವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಈಶ್ವರಪ್ಪ ನಡುವೆ ಜಟಾಪಟಿ ಆರಂಭವಾಗಿದೆ.
ಇದೀಗ ನರೇಂದ್ರ ಮೋದಿ ಅವರ ಭಾವ ಚಿತ್ರ ಬಳಸುವ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಮೋದಿ ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಶಿವಮೊಗ್ಗಕೋರ್ಟ್ ನಲ್ಲಿ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.
ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವ ಚಿತ್ರ ಬಳಸಿರುವ ವಿಚಾರಕ್ಕೆ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಈಶ್ವರಪ್ಪ ಮೋದಿ ಅವರಪ್ಪನ ಆಸ್ತಿಯಾ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಬಿಜೆಪಿ ಹಾಗೂ ಸಂಘಪರಿವಾರ ಹಿನ್ನೆಲೆಯ ನಾಯಕರು ಪ್ರಧಾನಿ ಮೋದಿಯನ್ನು ತೋರಿಸಿ ಮತ ಕೇಳುವ ಪ್ರವೃತ್ತಿ ಲೋಕಸಭಾ ಚುನಾವಣೆಯಲ್ಲೂ ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth