‘ಕಣ್ಮಣಿ’ ಹಾಡನ್ನು ಬಳಸಿದ್ದಕ್ಕೆ ದುಬಾರಿ ದಂಡ ಪಾವತಿಸಿದ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡ
ಇತ್ತೀಚೆಗೆ ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿದ್ದ ‘ಮಂಜುಮ್ಮೆಲ್ ಬಾಯ್ಸ್’(Manjummel Boys) ಚಿತ್ರ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ಕಮಲ್ ಹಾಸನ್ ನಟನೆಯ ‘ಗುಣ’ ಸಿನಿಮಾದ ‘ಕಣ್ಮಣಿ’(Kanmani) ಹಾಡನ್ನು ಬಳಸಿಕೊಳ್ಳಲಾಗಿತ್ತು. ಇದೀಗ ಈ ಹಾಡು ಬಳಸಿಕೊಂಡಿದ್ದಕ್ಕೆ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡ 60 ಲಕ್ಷ ರೂಪಾಯಿ ದಂಡ ಕಟ್ಟಿದೆ.
ಮಂಜುಮ್ಮೆಲ್ ಬಾಯ್ಸ್ ಚಿತ್ರದಲ್ಲಿ ತನ್ನ ಸಂಗೀತ ಸಂಯೋಜನೆಯ ‘ಕಣ್ಮಣಿ’ ಹಾಡನ್ನು ಅಕ್ರಮವಾಗಿ ಬಳಸಲಾಗಿದೆ ಎಂದು ಸಂಗೀತ ಸಂಯೋಜಕ ಇಳಯರಾಜ (Ilayaraja) 2 ಕೋಟಿ ರೂ. ಪರಿಹಾರ ಕೇಳಿ ಕೇಸ್ ಹಾಕಿದ್ದರು.
ಬಳಿಕ ಈ ಬಗ್ಗೆ ಚಿತ್ರ ತಂಡ ಸ್ವತಃ ಇಳಯರಾಜ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, 60 ಲಕ್ಷ ರೂಪಾಯಿಗಳನ್ನು ದಂಡವಾಗಿ ಪಾವತಿಸಲು ಅಂತಿಮವಾಗಿ ನಿರ್ಧಾರ ಕೈಗೊಂಡಿದ್ದು, ದುಬಾರಿ 60 ಲಕ್ಷ ರೂಪಾಯಿಗಳನ್ನು ಪಾವತಿಸಿದ್ದಾರೆ.
1991ರಲ್ಲಿ ರಿಲೀಸ್ ಆಗಿದ್ದ ಕಮಲ್ ಹಾಸನ್ (Kamal Haasan) ನಟನೆಯ ‘ಗುಣ’ ಸಿನಿಮಾದ ಹಾಡು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಬಳಕೆಯಾಗಿದ್ದು, ಸೂಪರ್ ಹಿಟ್ ಆಗಿತ್ತು. ರೀಲ್ಸ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡು ಇದೀಗ ವ್ಯಾಪಕವಾಗಿ ಜನಪ್ರಿಯತೆ ಪಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: