ಮ್ಯಾನೇಜರ್ ನ ಅನುಮಾನಾಸ್ಪದ ಸಾವು: ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಯಶ್ಪಾಲ್ ಸುವರ್ಣ ಸಹಿತ ಐವರ ವಿರುದ್ಧ ಪ್ರಕರಣ ದಾಖಲು - Mahanayaka

ಮ್ಯಾನೇಜರ್ ನ ಅನುಮಾನಾಸ್ಪದ ಸಾವು: ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಯಶ್ಪಾಲ್ ಸುವರ್ಣ ಸಹಿತ ಐವರ ವಿರುದ್ಧ ಪ್ರಕರಣ ದಾಖಲು

subbanna
10/03/2023

ಮಲ್ಪೆ: ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ(50) ಎಂಬವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ ಸುಬ್ಬಣ್ಣ ಮಾ.8ರಂದು ರಾತ್ರಿ ವೇಳೆ ಮಲ್ಪೆಯ ರಾಜ್ ಮಹಲ್ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತದೇಹದ ಬಳಿ ಡೆತ್ನೋಟ್ ದೊರಕಿದ್ದು, ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಸುವರ್ಣ, ಆಡಳಿತ ನಿರ್ದೇಶಕ ಜಗದೀಶ್ ಮೊಗವೀರ, ಮಾಜಿ ಆಡಳಿತ ನಿರ್ದೇಶಕ ಜೆ.ಕೆ ಸೀನ ಗಂಗೊಳ್ಳಿ, ಮ್ಯಾನೇಜರ್ ಸಾರಿಕಾ, ಸಾಲಗಾರ ರಿಯಾಝ್ ಎಂಬವರು ನೀಡಿದ ಮಾನಸಿಕ ಒತ್ತಡ ಹಾಗೂ ಬ್ಯಾಂಕಿನ ಆಡಳಿತ ಮಂಡಳಿ ಸಾಲ ವಸೂಲಾತಿಯನ್ನು ಮಾಡಿ ಕೊಡದಿದ್ದರೆ ನಿನ್ನ ಮನೆಯನ್ನಾದರೂ ಮಾರಿ ಬ್ಯಾಂಕಿನ ಸಾಲ ತೀರಿಸಬೇಕು, ಇಲ್ಲದಿದ್ದರೆ ನಿನ್ನ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಸಾವಿಗೆ ಬ್ಯಾಂಕಿನ ಆಡಳಿತ ಮಂಡಳಿಯ ಒತ್ತಡ ಮೇಲಾಧಿಕಾರಿಯ ಅಸಹಕಾರ ಮತ್ತು ಸಾಲಗಾರನ ಮೋಸದ ನಡವಳಿಕೆ ಕಾರಣ ಎಂದು ದೂರಲಾಗಿದೆ.ಈ ಸಾವಿನ ಬಗ್ಗೆ ಸಂಶಯ ಇದ್ದು, ಆದುದರಿಂದ ಆಡಳಿತ ಮಂಡಳಿ ಮತ್ತು ಸಾಲಗಾರನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಮೃತರ ಸಹೋದರ ಸುರೇಶ್ ದೂರಿನಲ್ಲಿ ತಿಳಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ