ಕಾರ್ಖಾನೆಯಲ್ಲಿ ಅಗ್ನಿ ಅವಘಡ: ನಾಲ್ವರು ಕಾರ್ಮಿಕರ ದಾರುಣ ಸಾವು: ಹಲವರಿಗೆ ಗಂಭೀರ ಗಾಯ
ಉತ್ತರ ಪ್ರದೇಶ: ಬರೇಲಿ ಫೋಮ್ ಕಾರ್ಖಾನೆಯೊಂದರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟ ನಾಲ್ವರು ಕಾರ್ಮಿಕರ ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಮೃತರನ್ನು ಅನೂಪ್ (25), ಅರವಿಂದ್ ಕುಮಾರ್ ಮಿಶ್ರಾ (32) ಮತ್ತು ರಾಕೇಶ್ (27) ಎಂದು ಗುರುತಿಸಲಾಗಿದ್ದು, ನಾಲ್ಕನೇ ಮೃತ ದೇಹದ ಗುರುತು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ. ಗಾಯಗೊಂಡ ಕಾರ್ಮಿಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗೌರವ್ ಸಿಂಗ್ ಹೇಳಿದರು.
ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ತಂಡವು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದು, ಸುಮಾರು ಮೂರು ಗಂಟೆಗಳ ಸತತ ಪ್ರಯತ್ನದಿಂದ ಬೆಂಕಿ ನಂದಿಸಲಾಯಿತು ಎಂದು ಫರೀದ್ಪುರದ ಪೋಲಿಸ್ ಅಧಿಕಾರಿ ಗೌರವ್ ಸಿಂಗ್ ತಿಳಿಸಿದ್ದಾರೆ.
ಘಟನೆಯ ಕುರಿತು ಮಾತನಾಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಕಾಂತ್ ದ್ವಿವೇದಿ ತನಿಖೆ ನಡೆಸುವಂತೆ ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರ ಮೋಹನ್ ಶರ್ಮಾ ಅವರಿಗೆ ಆದೇಶ ನೀಡಿರುವುದಾಗಿ ತಿಳಿಸಿದ್ದಾರೆ. ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw