ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್ಡದಲ್ಲಿ ಧಗಧಗನೆ ಉರಿಯುತ್ತಿರುವ ಬೆಂಕಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್ಡದಲ್ಲಿ ಧಗಧಗನೆ ಬೆಂಕಿ ಉರಿಯುತ್ತಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅರಣ್ಯ ಸುಟ್ಟು ಕರಕಲಾಗಿದೆ.
ಅರಣ್ಯ ಇಲಾಖೆಯ ಹತ್ತಾರು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್ಡದಲ್ಲಿ ಈ ಅನಾಹುತ ನಡೆದಿದ್ದು, ಬೆಂಕಿಯ ಕೆನ್ನಾಲಿಗೆ ವಿಸ್ತರಿಸುತ್ತಲೇ ಇದೆ. ಇದರಿಂದಾಗಿ ಸಸ್ಯ ಹಾಗೂ ಪ್ರಾಣಿ ಸಂಕುಲಕ್ಕೆ ಮಾರಕವಾಗಿ ಪರಿಣಮಿಸಿದೆ.
ಇನ್ನೂ ಎತ್ತರ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವುದರಿಂದ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹೋಗದಂತಾಗಿದೆ. ಅಪಾರ ಪ್ರಮಾಣದ ಬೆಂಕಿಯನ್ನು ಗಿಡಗಳಿಂದ ಹೊಡೆದು ನಂದಿಸುವ ಪ್ರಯತ್ನ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw