ಚಾರ್ಮಾಡಿ ಅರಣ್ಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ
27/12/2022
ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಚಾರ್ಮಾಡಿ ಅರಣ್ಯದಲ್ಲಿ ಕಾಡ್ಗಿಚ್ಚು ಸೃಷ್ಟಿಯಾಗಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ಚಾರ್ಮಾಡಿ ಘಾಟ್ ನ ಸೋಮನ ಕಾಡು ಸಮೀಪ ಬಾಳೂರು ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ನಿರತರಾಗಿದ್ದಾರೆ.
ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಪರಿಣಾಮವಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ನಿರಂತರ ಬೆಂಕಿ ಆರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka