ಚುನಾವಣೆ ಬಹಿಷ್ಕಾರದ ಮೊದಲ ಕೂಗು!: ರಾಜೀನಾಮೆಗೆ ಮುಂದಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು
ಚಿಕ್ಕಮಗಳೂರು: ರಸ್ತೆ ದುರಸ್ತಿ ಮಾಡದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.
2023ರ ಎಂ.ಎಲ್.ಎ. ಚುನಾವಣೆಯ ಮೊದಲ ಬಹಿಷ್ಕಾರದ ಕೂಗು ಕೇಳಿ ಬಂದಿದ್ದು, ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರ ಗ್ರಾಮಸ್ಥರು ಸರ್ಕಾರ ಹಾಗೂ ಜನಪ್ರತಿನಿಧಿಗಳ ನಡೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ರಾಜಕೀಯ ಪಕ್ಷಗಳ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ಜೊತೆಗೆ ಮತದಾನವನ್ನೇ ಬಹಿಷ್ಕಾರ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಡುಗಾರ ಗ್ರಾಮದಲ್ಲಿ ಇಂತಹದ್ದೊಂದು ಆಕ್ರೋಶ ಕೇಳಿ ಬಂದಿದ್ದು, ಗ್ರಾಮದ ರಸ್ತೆ ದುರಸ್ತಿ ಮಾಡದ ಸರ್ಕಾರ, ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ಕೇಳಿ ಬಂದಿದೆ.
450ಕ್ಕೂ ಅಧಿಕ ಜನ ಓಡಾಡುವ ಗ್ರಾಮದ ರಸ್ತೆ ಕುಸಿಯುವ ಹಂತಕ್ಕೆ ತಲುಪಿದೆ. ಆದರೆ, ಸರ್ಕಾರ ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂದು ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka