ವಾಯುಭಾರ ಕುಸಿತ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಹಾಗೂ ಮಳೆಯಾಗುವ ಸಾಧ್ಯತೆ ಇರುತ್ತದೆ.
ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ಹಾಗೂ ನದಿ ತೀರ ಪ್ರದೇಶಗಳಲ್ಲಿ ಇಳಿಯಬಾರದು.
ಮಕ್ಕಳು ಮತ್ತು ಸಾರ್ವಜನಿಕರು ಸಮುದ್ರತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲಬಾರದು.ನೆರೆ ಪೀಡಿತತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು.
ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ 24*7ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw