ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ - Mahanayaka

ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

hedakall
05/07/2024

ಬೆಳಗಾವಿ: ಮಹಾರಾಷ್ಟ್ರದ ಸಾವಂತವಾಡಿ ಹಾಗೂ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ಹಿಡಕಲ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.


Provided by

ಕಳೆದ 24 ಗಂಟೆಗಳಲ್ಲಿ ಸುಮಾರು 20 ಸಾವಿರ ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದು ಬಂದಿದ್ದು, ಒಂದೇ ದಿನದಲ್ಲಿ ಜಲಾಶಯದ ಮಟ್ಟ 5 ಅಡಿ ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯ ಇದಾಗಿದ್ದು, ಈಗ 2122 ಅಡಿ ನೀರು ಸಂಗ್ರಹವಾಗಿದೆ.

ಇನ್ನೊಂದೆಡೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಮತ್ತು ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ಕೂಡ ಭಾರೀ ಮಳೆಯಾಗುತ್ತಿದೆ. ಇದರಿಂದ ಮಲಪ್ರಭಾ ನದಿಯ ಮೂಲಕ ಜಲಾಶಯಕ್ಕೆ 12 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ಜಲಾಶಯದಲ್ಲಿ ಒಂದೇ ದಿನ ಮೂರು ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2043 ಅಡಿ ನೀರು ಸಂಗ್ರಹವಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ