ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆ.31ರಿಂದ ಆರಂಭ
ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ ಕಾರ್ಯಾಚರಣೆ ಆರಂಭಿಸಲಿದ್ದು ಅಂದು ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ.
ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ತಿರುಪತಿಗೂ ಸಂಪರ್ಕ:
ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿ ಸಿಕ್ಕಿದೆ ಎಂದೂ ಸಚಿವರು ತಿಳಿಸಿದ್ದಾರೆ.
ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ ಮತ್ತು ಅಲಯನ್ಸ್ ಏರ್ ಸಂಸ್ಥೆಗಳು ಈ ರಹದಾರಿಗಳಲ್ಲಿ ವಿಮಾನ ಸಂಚಾರ ಮಾಡುವ ಸಂಬಂಧ ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಿ ಯಶಸ್ವಿಯಾಗಿವೆ.
ಸದ್ಯಕ್ಕೆ ಹಗಲು ವೇಳೆಯ ವಿಮಾನ ಸಂಚಾರ ಮಾತ್ರ ಇರುತ್ತದೆ. ರಾತ್ರಿ ವೇಳೆ ಲ್ಯಾಂಡಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದ್ದು ಆದಷ್ಟು ಬೇಗ ಮುಗಿಯಲಿದೆ ಎಂದು ಅವರು ವಿವರಿಸಿದ್ದಾರೆ.
ಉಡಾನ್ ಯೋಜನೆಯಡಿ ಅನುಮತಿ ಪಡೆದಿರುವ ವಿಮಾನಯಾನ ಸಂಸ್ಥೆಗಳೂ ವಿಮಾನ ಸಂಚಾರಕ್ಕೆ ಸಿದ್ಧತೆ ನಡೆಸಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ಸಿಕ್ಕ ನಂತರ ಅವೂ ಕಾರ್ಯಾಚರಣೆ ನಡೆಸಲಿವೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw