'ಮತಗಟ್ಟೆಗಳನ್ನು ಗೆಲ್ಲುವತ್ತ ಗಮನ ಹರಿಸಿ': ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಸೂಚನೆ - Mahanayaka

‘ಮತಗಟ್ಟೆಗಳನ್ನು ಗೆಲ್ಲುವತ್ತ ಗಮನ ಹರಿಸಿ’: ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಸೂಚನೆ

16/11/2024

ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳನ್ನು ಗೆಲ್ಲುವತ್ತ ತಮ್ಮ ಗಮನವನ್ನು ಕೇಂದ್ರೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
“ಮೇರಾ ಬೂತ್ ಸಬ್ಸೆ ಮಜ್ಬೂತ್” ಕಾರ್ಯಕ್ರಮದ ಭಾಗವಾಗಿ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದದ ಸಂದರ್ಭದಲ್ಲಿ ಮಹಿಳೆಯರು, ಯುವಕರು ಮತ್ತು ರೈತರ ಬೂತ್ ಮಟ್ಟದ ಸಭೆಗಳನ್ನು ನಡೆಸುವಂತೆ ಮೋದಿಯವ್ರು ಹೇಳಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರದ ಯೋಜನೆಗಳ ವೀಡಿಯೊಗಳನ್ನು ಪ್ರಸಾರ ಮಾಡುವಂತೆ ಸೂಚಿಸಿದ್ದಾರೆ.


Provided by

ಮತದಾರರಲ್ಲಿ ಪಕ್ಷದ ಸಂದೇಶವನ್ನು ಪ್ರಚಾರ ಮಾಡಲು ವೈದ್ಯರಂತಹ ವೃತ್ತಿಪರರನ್ನು ತೊಡಗಿಸಿಕೊಳ್ಳುವಂತೆ ಮೋದಿ ಬಿಜೆಪಿ ಬೂತ್ ಕಾರ್ಯಕರ್ತರಿಗೆ ಕರೆ ನೀಡಿದರು.
ಮಹಾರಾಷ್ಟ್ರದ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಸುಳ್ಳುಗಳನ್ನು ಹರಡುತ್ತಿದೆ ಎಂದು ಆರೋಪಿಸಿದ ಮೋದಿ, ಬಿಜೆಪಿ ಕಾರ್ಯಕರ್ತರು ಈ ಸತ್ಯವನ್ನು ಮತದಾರರಿಗೆ ತಿಳಿಸಬೇಕು ಎಂದು ಹೇಳಿದರು.
“ನಾನು ಹೋದಲ್ಲೆಲ್ಲಾ, ನಮ್ಮ ಕಾರ್ಯಕರ್ತರ ಕಠಿಣ ಪರಿಶ್ರಮವನ್ನು ನೋಡಿದ್ದೇನೆ” ಎಂದು ಮೋದಿ ಹೇಳಿದ್ದಾರೆ.

 


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ