ಫುಡ್ ಡೆಲಿವರಿ ಬಾಯ್ ಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್: ವಿಡಿಯೋ ವೈರಲ್
ಚೆನ್ನೈ: ಝೊಮೆಟೋ ಫುಡ್ ಡೆಲಿವರಿ ಮಾಡುವ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತ್ತೂರಿನಲ್ಲಿ ನಡೆದಿದೆ. ಝೊಮಾಟೊ ಡೆಲಿವರಿ ಮಾಡುವ ವ್ಯಕ್ತಿ ವೆಂಕಟೇಶ್ ಎಂಬಾತನನ್ನು ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಧರ್ಮರಾಜ್ ಥಳಿಸಿದ್ದಾರೆ ಎಂದು ಹೇಳಲಾಗಿದ್ದು, ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿದ್ದಾರೆ.
ಇನ್ನೂ ಘಟನೆ ಸಂಬಂಧ ವೆಂಕಟೇಶ್ ವಿರುದ್ಧವೇ ದೂರು ದಾಖಲಾಗಿದ್ದು, ವೆಂಕಟೇಶ್ ಚಾಕು ತೆಗೆದು ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ದೂರು ದಾಖಲಿಸಿದ್ದಾರೆ. ಆದರೆ, ವೆಂಕಟೇಶ್ ಹಾಗೂ ಪೊಲೀಸ್ ನಡುವೆ 600 ರೂಪಾಯಿ ದಂಡಕ್ಕಾಗಿ ಜಗಳ ನಡೆದಿದೆ ಎಂದು ಹೇಳಲಾಗಿದೆ. ವೆಂಕಟೇಶ್ ಬಳಿ ಆತನ ವಾಹನದ ಅಗತ್ಯ ದಾಖಲೆಗಳು ಇಲ್ಲದಿರುವ ಕಾರಣ ದಂಡ ವಿಧಿಸಲಾಗಿದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ವೆಂಕಟೇಶ್ ಗೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದಕ್ಷಿಣ ಕೋರಿಯಾದ ಕಿಂಗ್ ಪಿನ್’ ನಂತೆ ಸಚಿವ ಮಾಧುಸ್ವಾಮಿ! | ಪತ್ರಿಕಾಗೋಷ್ಠಿಯಲ್ಲಿ ಪಿಸುಗುಟ್ಟಿದ ಬಿಜೆಪಿ ನಾಯಕರು
ತೋಟದ ಕೆಲಸಕ್ಕೆ ಹೊರಟಿದ್ದ ವೇಳೆ ಆನೆ ದಾಳಿ: ಕಾರ್ಮಿಕ ಸಾವು
ಜಡೆಯಿಂದ ಡಬಲ್ ಡಕರ್ ಬಸ್ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾಡಿದ ಮಹಿಳೆ
ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ ಎಂದ ಮೋದಿ | ಪಂಜಾಬ್ ನಲ್ಲಿ ನಡೆದದ್ದೇನು?