ವಯನಾಡ್ ಲೋಕಸಭಾ ಉಪಚುನಾವಣೆ: ರಾಹುಲ್—ಪ್ರಿಯಾಂಕಾ ಫೋಟೋ ಇರುವ ಆಹಾರ ಕಿಟ್ ವಶಕ್ಕೆ
ವಯನಾಡ್: ಲೋಕಸಭಾ ಉಪಚುನಾವಣೆಗೆ ಹಿನ್ನೆಲೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ, ವಯನಾಡ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರ ಚಿತ್ರವಿರುವ ಆಹಾರ ಕಿಟ್ ಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮನೆಯಂತಿರುವ ಸ್ಥಳವೊಂದರಲ್ಲಿ ಸುಮಾರು 30 ಆಹಾರದ ಪ್ಯಾಕೆಟ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಇದನ್ನು ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಸ್ಥಳೀಯ ಪೊಲೀಸರು ಪತ್ತೆ ಹಚ್ಚಿದ್ದು, ಭಾರತೀಯ ನ್ಯಾಯ್ ಸಂಹಿತಾ ಸೆಕ್ಷನ್ 173 ಮತ್ತು ಜನ ಪ್ರಾತಿನಿಧ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಸಂಸದ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಸ್ಥಾನವನ್ನು ತೊರೆದ ನಂತರ ಪ್ರಿಯಾಂಕಾ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದಾರೆ.
ವಶಪಡಿಸಿಕೊಂಡ ಆಹಾರ ಕಿಟ್ ಗಳನ್ನು ಇತ್ತೀಚೆಗೆ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ವಿತರಿಸಲು ತಂದಿರುವುದಾಗಿ ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಆದರೆ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಈ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಎಂದು ಪ್ರತಿಪಕ್ಷಗಳ ನಾಯಕರು ಆರೋಪಿಸಿದ್ದಾರೆ.
ಸಕ್ಕರೆ, ಅಕ್ಕಿ, ಚಹಾ ಪುಡಿ ಮುಂತಾದ ವಸ್ತುಗಳನ್ನು ಒಳಗೊಂಡಿರುವ ಆಹಾರ ಕಿಟ್ ಗಳಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಚಿತ್ರಗಳಿವೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: